Visit Channel

ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಇಂದು ಲೋಕಾರ್ಪಣೆ

modi

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಕಂಡ ಕನಸು ಇಂದು ನನಸಾಗಿದೆ. ‘ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ’ ಎಂಬ ಹಿರಿಮೆಗೆ ಪಾತ್ರವಾಗಿರುವ 9.02 ಕಿ.ಮೀ ಉದ್ದದ ಮನಾಲಿ-ಲೇಹ್‌ ನಡುವಿನ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಿದರು.

ಸಮುದ್ರಮಟ್ಟದಿಂದ 10 ಸಾವಿರ ಅಡಿ ಎತ್ತರದ ಹಿಮಾಚಲಪ್ರದೇಶದಲ್ಲಿ ನಿರ್ಮಾಣವಾಗಿರುವ ಈ ಸುರಂಗ ಮಾರ್ಗಕ್ಕೆ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಹೆಸರಿಡಲಾಗಿದೆ. ಈ ಸುರಂಗವು ಮನಾಲಿ ಹಾಗೂ ಲೇಹ್‌ ನಗರಗಳ ನಡುವಣ ಅಂತರ 46 ಕಿ.ಮೀ.ಯಷ್ಟು ತಗ್ಗಿಸಲಿದೆ. ಪ್ರಯಾಣದ ಅವಧಿ 4ರಿಂದ 5 ತಾಸಿನಷ್ಟು ಉಳಿತಾಯವಾಗಲಿದೆ.

ವ್ಯೂಹಾತ್ಮಕವಾಗಿ ಮಹತ್ವವಾಗಿರುವ ಈ ಯೋಜನೆಗೆ 2002ರಲ್ಲಿ ಆಗಿನ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ನೇತೃತ್ವದ ಸರ್ಕಾರ ಚಾಲನೆ ನೀಡಿತ್ತು. 2002ರಲ್ಲಿ ಅಡಿಗಲ್ಲು ಹಾಕಲಾಗಿದ್ದ ಈ ಕಾಮಗಾರಿ 3300 ಕೋಟಿ ರು. ವೆಚ್ಚದಲ್ಲಿ ಪೂರ್ಣಗೊಂಡಿದೆ. 2040 ರಲ್ಲಿ ಪೂರ್ಣಗೊಳ್ಳಬೇಕಿದ್ದ ಈ ಸುರಂಗವು 2014ರ ನಂತರದ ಚುರುಕುತನದ ಕಾಮಗಾರಿಯಿಂದಾಗಿ ಇಂದು ಲೋಕಾರ್ಪಣೆಗೊಂಡಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಸೇನಾ ಮುಖ್ಯಸ್ಥ ಜನರಲ್ ಎಮ್. ಎಮ್. ನರವಾನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವಿಶೇಷತೆಗಳು

9.02 ಕಿ.ಮೀ. ಸುರಂಗದ ಉದ್ದ

5 ತಾಸು: ಸುರಂಗದಿಂದ ಅವಧಿ ಉಳಿತಾಯ

46 ಕಿ.ಮೀ.: ಮನಾಲಿ, ಲೇಹ್‌ ನಡುವಣ ಅಂತರ ಇಳಿಕೆ

  • ಕುದುರೆ ಲಾಳಾಕೃತಿಯ ದ್ವಿಪಥ ಮಾರ್ಗವನ್ನು ಈ ಸುರಂಗ ಹೊಂದಿದೆ.
  • 8 ಮೀ. ಅಗಲದ ರಸ್ತೆ. 5.525 ಮೀ. ಎತ್ತರದ ವಾಹನ ಚಲಿಸಬಹುದು.
  • ನಿತ್ಯ 3000 ಕಾರು, 1500 ಲಾರಿಗಳ ಸಂಚಾರಕ್ಕೆ ಅವಕಾಶ.
  • ಗರಿಷ್ಠ 80 ಕಿ.ಮೀ. ವೇಗದಲ್ಲಿ ಸಾಗಬಹುದು.
  • ಸರ್ವಋುತು ಸುರಂಗ ಮಾರ್ಗವಾಗಿದ್ದು ಹಿಮಪಾತ ವೇಳೆಯೂ ವಾಹನಗಳು ಸಂಚರಿಸಬಹುದು.
  • 150 ಮೀಟರ್‌ಗಳಿಗೊಂದು ಟೆಲಿಫೋನ್‌ ವ್ಯವಸ್ಥೆ.
  • ಪ್ರತೀ 1 ಕಿ.ಮೀ.ಗೊಂದು ಗಾಳಿ ಶುದ್ಧತೆಯ ಪರೀಕ್ಷಾ ವ್ಯವಸ್ಥೆ.
  • ಪ್ರತೀ 250 ಮೀಟರ್‌ಗೊಂದು ಬ್ರಾಡ್‌ಕಾಸ್ಟ್‌ ವ್ಯವಸ್ಥೆ, ಸಿಸಿ ಕ್ಯಾಮೆರಾ, ಸ್ವಯಂಚಾಲಿತ ಅನಾಹುತ ಘಟನಾ ಪತ್ತೆ ವ್ಯವಸ್ಥೆ.

Latest News

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.

JK
ದೇಶ-ವಿದೇಶ

ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರನ್ನು ಹತ್ಯೆಗೈದ ಭಯೋತ್ಪಾದಕರು!

ಕಾಶ್ಮೀರಿ ಪಂಡಿತರೊಬ್ಬರನ್ನು(Kashmiri Pandits) ಗುಂಡಿಕ್ಕಿ ಕೊಂದು ಆತನ ಸಹೋದರನನ್ನು ಗಾಯಗೊಳಿಸಿದ್ದಾರೆ. ಸಂತ್ರಸ್ತ ಸಹೋದರನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.