ಕೇಂದ್ರ ಸಚಿವಾಲಯವು ಅನ್ಲಾಕ್ 5.೦ ಯನ್ನು ಈಗಾಗಲೇ ಜಾರಿಯಾಗಿದ್ದು, ಶಿಕ್ಷಣ ಸಂಸ್ಥೆಗಳ ಪುನರಾರಂಭದ ಬಗ್ಗೆ ಚಿಂತನೆ ನಡೆಯುತ್ತಿದೆ. ಇದೇ ತಿಂಗಳ ೧೫ರಿಂದ ಅನೇಕ ಷರತ್ತುಗಳೊಂದಿಗೆ ಶಾಲಾ ಕಾಲೇಜುಗಳನ್ನು ತೆರೆಯುವ ಅನುಮತಿ ನೀಡುವ ಸಾಧ್ಯತೆ ಇದೆ.
ಈ ವಿಚಾರವಾಗಿ ಒಂದಿಷ್ಟು ಮಾರ್ಗಸೂಚಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಅದರ ಪ್ರಕಾರ ಶಾಲೆಗಳು ಮತ್ತು ತರಬೇತಿ ಕೇಂದ್ರಗಳನ್ನು ತೆರೆಯಲು ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ಈ ತಿಂಗಳ 15ರ ನಂತರ ಶ್ರೇಣೀಕೃತ ಮಾದರಿಯಲ್ಲಿ ನಿರ್ಧಾರ ತೆಗೆದುಕೊಳ್ಳುವ ಅನುಮತಿಯನ್ನು ನೀಡಲಾಗಿದೆ.
ಆದರೆ ಆನ್‌ಲೈನ್ ಅಥವಾ ದೂರ ಶಿಕ್ಷಣಕ್ಕೆ ಮೊದಲ ಆದ್ಯತೆಯನ್ನು ನೀಡಬೇಕು. ಶಾಲೆಗಳಲ್ಲಿ ತರಗತಿಗಳನ್ನು ನಡೆಸುವ ಅವಕಾಶವಿದೆ ಆದರೆ, ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುವ ಬದಲು ಆನ್‌ಲೈನ್ ಶಿಕ್ಷಣವನ್ನು ಬಯಸಿದರೆ, ಹಾಗೆ ಮಾಡಲು ಅನುಮತಿ ನೀಡಬೇಕು. ವಿದ್ಯಾರ್ಥಿಗಳಿಗೆ ಕಡ್ಡಾಯ ಹಾಜರಾತಿಯನ್ನು ಜಾರಿಗೊಳಿಸಬಾರದು ಮತ್ತು ಪೋಷಕರ ಲಿಖಿತ ಒಪ್ಪಿಗೆಯ ಮೆರೆಗೆ ಸಂಪೂರ್ಣ ಅವಲಂಬಿತರಾಗಿರಬೇಕು.
ಕರ್ನಾಟಕದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಮುಂಗಡ ಸಭೆಯನ್ನು ನಡೆಸಿ, ಅವರ ಅಭಿಪ್ರಾಯ ಸಂಗ್ರಹದ ಮೇರೆಗೆ ಶಾಲಾ ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಅಕ್ಟೋಬರ್ 10 ರ ನಂತರ ಚಿಂತನೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಸರೇಶ್ ಕುಮಾರ್ ಹೇಳಿದ್ದಾರೆ.
ಸಾಧಕ ಬಾಧಕಗಳನ್ನು ಅರಿತ ಹಿರಿಯರೇ ಅಜಾಗರೂಕತೆಯಿಂದ ನಡೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಇನ್ನು ಶಿಕ್ಷಣ ಸಂಸ್ಥೆಗಳ ಪುನರಾರಂಭಿಸಿದಾಗ ಮಕ್ಕಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಾರೆಯೇ ಎನ್ನುವುದು ಪ್ರಶ್ನೆಯಾಗಿ ಉಳಿದಿದೆ.