ಶ್ರೀರಂಗಪಟ್ಟಣದಲ್ಲಿ ಸರಳ ದಸರಾಗೆ ಚಾಲನೆ

ಶ್ರೀರಂಗಪಟ್ಟಣ, ಅ. 23: ಕೊರೊನಾ ಮಹಾಮಾರಿಯಿಂದಾಗಿ ಈ ಬಾರಿಯ ದಸರಾ ಕಳೆಗುಂದಿದೆ.  ಈ ಕಾರಣದಿಂದ ಶ್ರೀರಂಗಪಟ್ಟಣದಲ್ಲಿ ಪ್ರತಿವರ್ಷ ಅದ್ಧೂರಿಯಾಗಿ ನಡೆಸುವ ನಾಡ ದೇವತೆ ಚಾಮುಂಡೇಶ್ವರಿಯ ಉತ್ಸವವದ ಸರಳ ಆಚರಣೆ ನಡೆಯಲಿದ್ದು ಇಂದು ಸಾಂಪ್ರದಾಯಿಕವಾಗಿ ಚಾಲನೆ ನೀಡುವುದರ ಜತೆಗೆ, ಜಿಲ್ಲೆಯ 17 ಮಂದಿ ಕೊರೊನಾ ವಾರಿಯರ್ಸ್‌ಗಳು ತಾಯಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು.

ವಿಶೇಷವಾಗಿ ಅಲಂಕೃತಗೊಂಡಿದ್ದ ತಾಯಿಯ ವಿಗ್ರಹ ಹೊತ್ತ ರಥಕ್ಕೆ ಪುಷ್ಪಾರ್ಚನೆ ನೆರವೇರಿಸಲಾಯಿತು. ಸ್ಥಳೀಯ ಆಯ್ದ ಜಾನಪದ ಕಲಾತಂಡಗಳು ಪೂರ್ಣಕುಂಭವದೊಂದಿಗೆ  ಮೆರವಣಿಗೆಗೆ ಸಾಂಪ್ರದಾಯಿಕ ಚಾಲನೆ ನೀಡಿ ದಸರಾಗೆ ಮೆರಗು ನೀಡಿದರು.

ಆಲಯದಲ್ಲಿರುವ 5 ಅಡಿ ಎತ್ತರದ 250 ಕೆ.ಜಿ ತೂಕವಿರುವ ತಾಯಿ ಚಾಮುಂಡೇಶ್ವರಿ ಮೂರ್ತಿಯನ್ನು ಅಲಂಕರಿಸಿ ಮೆರವಣಿಗೆ ನಡೆಸಲಾಯ್ತು. ರಥಸಾಗುವ ಪಟ್ಟಣದ ರಾಜ ಬೀದಿಗಳನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ರಥದಲ್ಲಿ ಸಾಗುವ ಮಾತೆಯು ಕಣ್ಮನ ಸೆಳೆಯುವಂತಿದ್ದಳು. ಜಯ ಘೋಷಗಳ ನಡುವೆ ಸಾಗಿದ ರಥೋತ್ಸವಕ್ಕೆ ಕೆಲವಾರು ಮಂದಿ ಸಾಕ್ಷಿಯಾದರು.

Latest News

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.