ತೆಲಂಗಾಣ: ಶ್ರೀಶೈಲಂ ಜಲವಿದ್ಯುತ್ ಕೇಂದ್ರದಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, 9 ಮಂದಿ ಸಿಲುಕಿ ಹಾಕಿಕೊಂಡಿರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಇನ್ನು ಘಟನೆ ವೇಳೆ ಒಟ್ಟು 19 ಮಂದಿ ನಾಲ್ಕನೇ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು, ಈ ಪೈಕಿ 10 ಮಂದಿ ಟನಲ್ ಮೂಲಕ ಹೊರಬಂದು ಬಚಾವ್ ಆಗಿದ್ದಾರೆ. ಆದರೆ ಒಳಗಡೆ ಉಳಿದಿದ್ದ 9 ಕುರಿತು ಇನ್ನೂ ವರದಿಯಾಗಿಲ್ಲ ಎಂದು ಎಎನ್‌ಐ ವರದಿ ಮಾಡಿದೆ.
ಇನ್ನು ಬೃಹತ್ ಸ್ಪೋಟದಿಂದಾಗಿ ನಾಲ್ಕನೇ ಘಟಕದಲ್ಲಿ ಸಂಪೂರ್ಣ ಬೆಂಕಿ ಆವರಿಸುವ ಜೊತೆಗೆ ಸಂಪೂರ್ಣವಾಗಿ ಹೊಗೆ ತುಂಬಿಕೊಂಡಿತ್ತು. ಹೀಗಾಗಿ ಅಗ್ನಿಶಾಮಕ ಸಿಬ್ಬಂದಿಗಳು ಒಳ ಪ್ರವೇಶಕ್ಕೆ ಸಾಧ್ಯವಾಗಿರಲಿಲ್ಲ. ಶ್ರೀಶೈಲಂ ಪವರ್ ಸ್ಟೇಷನ್ನ 6 ಯೂನಿಟ್ಗಳಿಗೂ ಬೆಂಕಿ ಹರಡುತ್ತಿದ್ದು, ಎಲ್ಲೆಡೆ ಹೊಗೆ ತುಂಬಿಕೊಂಡಿದೆ. ಹೀಗಾಗಿ ಸವಾಲಿನೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಇನ್ನು ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಮೂಲ ಕಾರಣ ಎನ್ನಲಾಗಿದ್ದು. ಆದರೆ ತನಿಖೆ ಬಳಿಕವಷ್ಟೆ ನಿಜಾಂಶ ಹೊರಬರಬೇಕಿದೆ.