ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ : ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು ಡಿ 18 : ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿರುವುದರ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, ಬೆಳಗಾವಿಯಲ್ಲಿ ಕಳೆದ ರಾತ್ರಿ ಪುಂಡರು ಪೊಲೀಸ್‌ ವಾಹನಗಳಿಗೆ ಹಾನಿ ಮಾಡಿ ಬೆಂಕಿ ಹಚ್ಚಿರುವುದು ಅಕ್ಷಮ್ಯ. ವಿಧಾನಮಂಡಲ ಅಧಿವೇಶನಕ್ಕೆ ಹೋಗಲು ಪಾಸ್‌ ಅಂಟಿಸಲಾಗಿದ್ದ ವಾಹನಗಳನ್ನೇ ಗುರಿ ಮಾಡಲಾಗಿದೆ. ಕನ್ನಡಿಗರ ಹೆಮ್ಮೆ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಹಾಳು ಮಾಡಿರುವುದು ಕ್ಷಮಾರ್ಹವಲ್ಲದ ಅಪರಾಧ ಎಂದು ಹೇಳಿದ್ದಾರೆ.

ಬೆಳಗಾವಿಯಲ್ಲಿ ಪ್ರಕ್ಷುಬ್ಧತೆ ಸೃಷ್ಟಿಸಿ ಭಾಷಾ ವೈಷಮ್ಯ ಹೆಚ್ಚಿಸುವುದು ದುರುಳರ ಉದ್ದೇಶವಿದ್ದಂತಿದೆ. ಶಾಂತಿಯನ್ನು ಕದಡಿ ಜನರಲ್ಲಿ ಭಯಭೀತಿ ಉಂಟು ಮಾಡಲು ಪುಂಡರನ್ನು ಪ್ರಚೋದಿಸಿದವರನ್ನು ಹೊರಗೆಳೆದು ಶಿಕ್ಷಿಸಬೇಕು. ಈ ಪುಂಡಾಟದ ಹಿಂದೆ ದೊಡ್ಡ ಹುನ್ನಾರವೇ ಇರುವಂತಿದೆ ಎಂದು ಹೇಳಿದ್ದಾರೆ.

ಬೆಳಗಾವಿ ವಿವಾದ ಮುಗಿದ ಅಧ್ಯಾಯ. ಆದಾಗ್ಯೂ ಕೆಲ ವಿಚ್ಛಿಧ್ರಕಾರಿ ಶಕ್ತಿಗಳು ಆ ಭಾಗದಲ್ಲಿ ಅಶಾಂತಿ ಸೃಷ್ಟಿಸುತ್ತ ಕನ್ನಡಿಗರು-ಮರಾಠಿಗರ ನಡುವೆ ವೈಷಮ್ಯಕ್ಕೆ ಕಾರಣವಾಗುತ್ತಿದ್ದಾರೆ. ಅಂಥ ಶಕ್ತಿಗಳನ್ನು ಸರಕಾರ ಮೂಲೋತ್ಪಾಟನೆ ಮಾಡಬೇಕು. ಪುಂಡರನ್ನು ಕೂಡಲೇ ಬೇಟೆಯಾಡಿ ಇನ್ನೆಂದೂ ಅಂಥ ತಪ್ಪು ಮಾಡದಂತೆ ತಕ್ಕಶಾಸ್ತಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಸರಕಾರಿ ಕಾರುಗಳನ್ನು ಗುರಿ ಮಾಡಿರುವುದು ರಾಜ್ಯ ಸರಕಾರವನ್ನೇ ಗುರಿ ಮಾಡಿದಂತೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೇಲೆ ದಾಳಿ ಮಾಡಿರುವುದು ಕನ್ನಡಿಗರ ಮೇಲೆ, ಕರ್ನಾಟಕದ ಮೇಲೆ ದಾಳಿಗೆ ಸಮ. ಸರಕಾರ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಕೂಡಲೇ ಆ ದುರುಳರಿಗೆ ಕನ್ನಡಿಗರ ಶಕ್ತಿ ಏನೆಂಬುದನ್ನು ತೋರಿಸಬೇಕು ಎಂದು ಹೇಳಿದ್ದಾರೆ.

Latest News

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.