Visit Channel

ಸಚಿವರ ಪುತ್ರನ ಕಾರು ಅಪಘಾತ

ac-1

ದಾವಣಗೆರೆ, ನ. 11: ನಗರದ ಹಳೇ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಚಿವ ಜಗದೀಶ್ ಶೆಟ್ಟರ್ ಪುತ್ರನ ಕಾರು ಅಪಘಾತಕ್ಕೀಡಾದ ಘಟನೆ ನಡೆದಿದೆ.

ಘಟನೆಯಲ್ಲಿ ಪ್ರಶಾಂತ್ ಶೆಟ್ಟರ್ ಹಾಗೂ ಅವರ ಪತ್ನಿ ಅಂಚಲ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹತ್ತಿರದ ಹೈಟೆಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಡಿವೈಡರ್ ಬಳಿ ಲಾರಿ ಹಾಗೂ ಲ್ಯಾಂಡ್ ರೋವರ್ ಡಿಸ್ಕವರಿ ಕಾರು ಮುಖಾಮುಖಿಯಾದ ಪರಿಣಾಮ ಅಪಘಾತ ಸಂಭವಿಸಿದೆ.

ಶೆಟ್ಟರ್ ಪುತ್ರ ಇಂದು ದಾವಣಗೆರೆಯಿಂದ ಹುಬ್ಬಳ್ಳಿ ನಿವಾಸಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ದಕ್ಷಿಣ ಸಂಚಾರ ಪೊಲೀಸ್ ಠಾಣೆ ಪಿಎಸ್‍ಐ ಕಿರಣ್ ಕುಮಾರ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.