ಸರ್ಕಾರಿ ಕಚೇರಿಗಳಲ್ಲಿ ಸಂಭ್ರಮದ ಆಯುಧ ಪೂಜೆ

ಬೆಂಗಳೂರು, ಅ.23: ನಾಳೆಯಿಂದ ಮೂರು ದಿನಗಳ ಕಾಲ ಸಾಲು ಸಾಲು ಸಾರ್ವತ್ರಿಕ ರಜೆಯಿರುವುದರಿಂದ ಎಲ್ಲಾ ಸರಕಾರಿ ಕಚೇರಿಗಳಲ್ಲಿ ಇಂದು ಸಡಗರ ಸಂಭ್ರಮದಿಂದ ಆಯುಧ ಪೂಜೆಯನ್ನು ಆಚರಿಸಲಾಯಿತು.

ಭಾನುವಾರ ಆಯುಧ ಪೂಜೆ, ಸೋಮವಾರ ವಿಜಯದಶಮಿ ಹಬ್ಬವಿದ್ದು, ನಾಳೆ ಈ ತಿಂಗಳ ನಾಲ್ಕನೇ ರಜಾ ದಿನವಾಗಿದೆ. ಸಾಲು ಸಾಲು ರಜೆಗಳಿರುವುದರಿಂದ ಬಹುತೇಕ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಇಂದೇ ಆಯುಧ ಪೂಜೆ ನೆರವೇರಿಸಲಾಯಿತು.

ಹಾಗೆಯೇ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ, ಬಹುಮಹಡಿಗಳ ಕಟ್ಟಡ, ಹೈಕೋರ್ಟ್, ವಿಶ್ವೇಶ್ವರಯ್ಯ ಗೋಪುರ, ಬಿಬಿಎಂಪಿ ಸೇರಿದಂತೆ ಸಂಭ್ರಮ ಸಡಗರದಿಂದ ಆಯುಧ ಪೂಜೆ ನೆರವೇರಿಸಲಾಯಿತು.

ಚಾಲಕರುಗಳು ಕೂಡ ತಮ್ಮ ವಾಹನಗಳನ್ನು ಶುಚಿಗೊಳಿಸಿ , ಅಲಂಕಾರ ಮಾಡಿ, ಕಚೇರಿ ಮುಂದೆ ನಿಲ್ಲಿಸಿ ಪೂಜೆ ಮಾಡಿದರು. ಕಚೇರಿಯಲ್ಲಿದ್ದ ಕಂಪ್ಯೂಟರ್, ಅಲ್ಮೇರಾ ಮತ್ತಿತರ ಸಲಕರಣೆಗಳಿಗೆ ಪೂಜೆ ನೆರವೇರಿಸಿ ಸಿಹಿ ಮತ್ತು ಪ್ರಸಾದ ಹಂಚಲಾಯಿತು. ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

ಪೂಜೆಗೆ ಹಾಗೂ ಕುಂಬಳಕಾಯಿಗೆ ರಾಸಾಯನಿಕ ಮಿಶ್ರಿತ ಬಣ್ಣ ಬಳಸದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸೂಚಿಸಿತ್ತು. ಆದರೂ ಆಯುಧ ಪೂಜಾ ಸಂಭ್ರಮಕ್ಕೆ ಕೊರೊನಾ ಅಡ್ಡಿಯಾದಂತೆ ಕಂಡುಬರಲಿಲ್ಲ.

Latest News

ಮಾಹಿತಿ

ITR ಸಲ್ಲಿಕೆ ಗಡುವು ಜುಲೈ 31 ಅಂತ್ಯ ; ದಂಡ ಶುಲ್ಕವಿಲ್ಲದೆ ಯಾರೆಲ್ಲಾ ITR ಸಲ್ಲಿಸಬಹುದು ಗೊತ್ತಾ?

ಗಡುವು ಮುಗಿದರೂ ಯಾರೆಲ್ಲ ದಂಡ ಶುಲ್ಕವಿಲ್ಲದೆ ಐಟಿಆರ್‌ ಸಲ್ಲಿಸಬಹುದು, ಇದಕ್ಕೆ ಸಂಬಂಧಿಸಿದಂತೆ ನಿಯಮ ಏನು ಹೇಳುತ್ತದೆ ಎನ್ನುವ ವಿವರ ಇಲ್ಲಿದೆ. ಮುಂದೆ ಓದಿ,

ದೇಶ-ವಿದೇಶ

“ನನ್ನ ಮಕ್ಕಳಿಗೆ ಆಹಾರ ನೀಡಬೇಕೇ? ಅಥವಾ ಅವರನ್ನು ಕೊಲ್ಲಬೇಕೇ?”: ಬೆಲೆ ಏರಿಕೆ ಬಗ್ಗೆ ಪಾಕ್ ಮಹಿಳೆ ಆಕ್ರೋಶ!

ನನ್ನ ಮಕ್ಕಳಿಗೆ ಹಾಲು ಮತ್ತು ಔಷಧಿಗಳನ್ನು ಖರೀದಿಸುವುದು, ನನ್ನ ಮಕ್ಕಳಿಗೆ ಆಹಾರ ನೀಡುವುದು ಯಾವುದು ನನ್ನಿಂದ ಸಾಧ್ಯವಾಗುತ್ತಿಲ್ಲ.

ಮಾಹಿತಿ

ಬುದ್ದಿವಂತರು ಜಗಳವನ್ನು ಹೇಗೆ ತಪ್ಪಿಸುತ್ತಾರೆ ಗೊತ್ತೇ? ; ಈ ಅಚ್ಚರಿ ಮಾಹಿತಿ ಓದಿ

ಕೆಟ್ಟ ವಾಗ್ವಾದವನ್ನು ತಡೆಯುವುದು ಹೇಗೆ ಮತ್ತು ಅದನ್ನು ಸರಿಯಾಗಿ ರೀತಿಯಲ್ಲಿ ಹೇಗೆ ನಿಭಾಯಿಸಬಹುದು ಎನ್ನುವುದಕ್ಕಾಗಿ ಕೆಲವು ಉಪಾಯಗಳು ಇಲ್ಲಿವೆ ನೋಡಿ.

ರಾಜಕೀಯ

ನಿತೀಶ್‌ ಕುಮಾರ್‌ ಪ್ರಧಾನಿಯಾಗುವ ಭ್ರಮೆಯಲ್ಲಿದ್ದಾರೆ, ಅದಕ್ಕಾಗಿ ವಿಪಕ್ಷಗಳ ಕೂಟ ಸೇರಿದ್ದಾರೆ : ಬಿಜೆಪಿ

ಇದು ‘ಆಯಾ ರಾಮ್, ಗಯಾ ರಾಮ್ʼ ಕಾಯಿಲೆಗೆ ಉದಾಹರಣೆ. ಹಡಗು ಜಿಗಿದು ದಾಖಲೆ ನಿರ್ಮಿಸಿದ್ದಾರೆ. ಅವರು ಉನ್ನತ ಕುರ್ಚಿಗೆ ಹಾತೊರೆಯುತ್ತಿದ್ದಾರೆ.