Visit Channel

ಸಲಿಂಗ ಪ್ರೇಮಿಗಳ ಪ್ರಿ ವೆಡ್ಡಿಂಗ್ ಫೋಟೋಶೂಟ್ ಹೇಗಿದೆ ಗೊತ್ತಾ..?

xgay-1-1576220984.pagespeed.ic_.suHX0nINT9

ಕೇರಳ, ಡಿ 13: ಈಗಂತೂ ಪ್ರಿ ವೆಡ್ಡಿಂಗ್ ಫೋಟೋಶೂಟ್ ಮಾಡಿಸಿಕೊಳ್ಳದೆ ವಿವಾಹವೇ ಇಲ್ಲವೆಂಬಂತಾಗಿದೆ. ವಿಭಿನ್ನ ಬಗೆಯ ಪ್ರಿ ವೆಡ್ಡಿಂಗ್ ಫೊಟೋಶೂಟ್ ಮಾಡಿಕೊಂಡು ಟ್ರೆಂಡ್ ಸೃಷ್ಟಿಸಬಯಸುವ ಜೋಡಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ..ಇವರ ಸಾಲಿಗೆ ಹೊಸ ಸೇರ್ಪಡೆಯೇ ಕೇರಳ ಮೂಲದ ಈ ಜೋಡಿ..

ಸಲಿಂಗ ಪ್ರೇಮಿಗಳಾದ ಅಬ್ದುಲ್​​ ರಹೀಂ​ ಮತ್ತು ನೆವಿದ್​ ಆಂಟೋನಿ ಚುಲ್ಲಿಕಾಲ್ ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸಿದ್ದು, ಅದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ನವಜೋಡಿಗಳು ಮದುವೆಗೆ ಮುನ್ನ ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸಿಕೊಳ್ಳುತ್ತಾರೆ. ಹಾಗೆಯೇ ನಾವೂ ಮಾಡಿಸಿದೆವು. ಪ್ರೀತಿ ಎಲ್ಲರಿಗೂ ಒಂದೇ. ಎಲ್ಲಕ್ಕಿಂತ ಹೆಚ್ಚಾಗಿ ಸಲಿಂಗಿಗಳ ಪ್ರೀತಿಯು ಎಲ್ಲರಂತೆ ಸಹಜ ಎಂಬ ಸಂದೇಶವನ್ನು ಸಾರುವ ಉದ್ದೇಶವೂ ಈ ಫೋಟೋಶೂಟ್ ಹಿಂದಿದೆ. ಪ್ರೀತಿಯಲ್ಲಿ ಯಾವುದನ್ನೂ ಕಳೆದುಕೊಳ್ಳಬಾರದು, ಏಕೆಂದರೆ ಅದರಲ್ಲಿ ಎಲ್ಲವೂ ಸುಂದರ” ಎಂಬ ಸಂದೇಶ ಹಾಕಿ ಫೋಟೋಗಳನ್ನು ಹಂಚಿಕೊಂಡಿದ್ದು, ಫೋಟೊಗಳಿಗೆ ನೆಟ್ಟಿಗರು ಶುಭ ಹಾರೈಸಿದ್ದಾರೆ.

ಐದು ವರ್ಷದಿಂದ ಪ್ರೀತಿಸುತ್ತಿರುವ ಈ ಜೋಡಿಗೆ ಸದ್ಯ ಕಂಕಣ ಬಲ ಕೂಡಿ ಬಂದಿದ್ದು, ಮನೆಯವರ ವಿರೋಧದದ ನಡುವೆಯೂ ವಿವಾಹಿತರಾಗುತ್ತಿದ್ದಾರಂತೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.