ವಿಜಯಪುರ, ಅ. 14: ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದ್ದು, ವಿಜಯಪುರ ಜಿಲ್ಲೆಯೂ ಕೂಡ ಇದಕ್ಕೆ ಹೊರತಾಗಿಲ್ಲ. ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಬಸಪ್ಪನ ಕೆರೆ ಒಡೆದಿದ್ದು, ಕೆರೆಯಿಂದ ಭಾರೀ ಪ್ರಮಾಣದ ನೀರು ಅಕ್ಕ ಪಕ್ಕದ ಜಮೀನಿಗೆ ನುಗ್ಗಿದ್ದು, ಮಣ್ಣು ಸಮೇತ ಬೆಳೆಯನ್ನು ಕೊಚ್ಚಿಕೊಂಡು ಹೋಗಿದೆ. ಇದರಿಂದ ಬಾಧಿತ ರೈತರು ಕಂಗಾಲಾಗಿದ್ದು, ಸರ್ಕಾರ ಸಂತ್ರಸ್ತ ರೈತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.
ಜಿಲ್ಲೆಯಾದ್ಯಂತ ಹಲವಾರು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ಹೆಚ್ಚಿನ ಪ್ರದೇಶಗಳು ಪ್ರವಾಹದಿಂದ ತತ್ತರಿಸಿ ಹೋಗಿದೆ. ರೈತರು ಬೆಳೆದ ಬೆಳೆಗಳೆಲ್ಲಾ ಮಳೆಯ ನೀರಿನಿಂದ ನಾಶವಾಗಿದೆ.