ಬೆಂಗಳೂರು: ಕೇಂದ್ರ ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿದಾಡುತ್ತಿರುವ ಸಿಬಿಐ ಗೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಮಗನ ಬ್ರಹ್ಮಾಂಡ ಭ್ರಷ್ಟಾಚಾರ ಕಣ್ಣಿಗೆ ಕಾಣಿಸುತ್ತಿಲ್ಲವೇ? ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಪ್ರತಿ ಚುನಾವಣಾ ಸಂದರ್ಭದಲ್ಲೂ ಕಾಂಗ್ರೆಸ್ ನಾಯಕರ ಮೇಲೆ ದಾಳಿ ನಡೆಸುವುದು ಯಾಕೆ? ಎಂದು ಪ್ರಶ್ನಿಸಿದ್ದಾರೆ. ನಾಯಕರ ಆತ್ಮಸ್ಥೈರ್ಯ ಕುಗ್ಗಿಸುವುದೇ ಈ ದಾಳಿಯ ಸಂಚು. ಆದ್ರೆ ಅದು ಬಿಜೆಪಿ ನಾಯಕರ ಭ್ರಮೆಯಷ್ಟೆ ಎಂದು ಲೇವಡಿ ಮಾಡಿದ್ದಾರೆ.
ಡಿಕೆಶಿ ಮನೆ ಮೇಲಿನ ದಾಳಿ ಸಂಪೂರ್ಣ ರಾಜಕೀಯ ಪ್ರೇರಿತ. ಉಪಚುನಾವಣೆ ಘೋಷಣೆ ಆದ ಸಂದರ್ಭದಲ್ಲೇ ಈ ದಾಳಿ ನಡೆಸಿರುವುದು ಶಿರಾ ಹಾಗೂ ರಾಜರಾಜೇಶ್ವರಿ ನಗರದ ಚುನಾವಣೆಯಲ್ಲಿ ಕುತಂತ್ರ ಮಾಡುವುದಾಗಿದೆ. ಬಿಜೆಪಿ ನಾಯಕರು ತಮ್ಮ ದ್ವೇಷದ ರಾಜಕಾರಣಕ್ಕೆ ಬೆಲೆ ತೆರುವ ಕಾಲ ದೂರವಿಲ್ಲ ಎಂದು ಎಚ್ಚರಿಸಿದ್ದಾರೆ.