Visit Channel

ಸಿಎಎ ಪ್ರತಿಭಟನಾ ಕಾವಿಗೆ ನಾಳೆ ಉತ್ತರ ಕರ್ನಾಟಕ ಸ್ತಬ್ಧ.

WhatsApp-Image-2020-01-20-at-16.39.48-1

ನಾಳೆ ಉತ್ತರ ಕರ್ನಾಟಕ ಸ್ಥಬ್ಧವಾಗಲಿದೆ. ಜನಜೀವನ ಅಸ್ತವ್ಯಸ್ತಗೊಳ್ಳಲಿದೆ. ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೊಳಿಸಲು ಹೊರಟಿರೋ ಸಿಎಎ ಕಾಯ್ದೆಯನ್ನು ವಿರೋಧಿಸಿ ಉತ್ತರ ಕರ್ನಾಟಕದ ಆರು ಜಿಲ್ಲೆಯ ಲಕ್ಷಾಂತರ ಮಂದಿ ಬೀದಿಗಿಳಿಯಲಿದ್ದಾರೆ. ಎನ್‍ಪಿಆರ್, ಎನ್‍ಆರ್‍ಐಸಿ ಜಾರಿ ದೇಶಕ್ಕೆ ಮಾರಕ ಅನ್ನೋದನ್ನ ಸಾರಲು ಉತ್ತರ ಕರ್ನಾಟಕದ ಪ್ರಮುಖ ನಾಯಕರು ನಾಳೆ ಕಲ್ಬುರ್ಗಿಯ ರಿಂಗ್ ರಸ್ತೆಯ ಪೀರ್ ಬಂಗಾಲಿ ಮೈದಾನದಲ್ಲಿ ಮೂರು ಗಂಟೆಗೆ ಕರ್ನಾಟಕ ಜನತಾ ವೇದಿಕೆಯಡಿಯಲ್ಲಿ ಸೇರಲಿದ್ದಾರೆ .ಬಿಜೆಪಿ ಸರ್ಕಾರದ ಜನತಾ ವಿರೋಧಿ ಧೋರಣೆಯನ್ನು ಖಂಡಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಡಾ. ಮಲ್ಲಿಕಾರ್ಜುನ್ ಖರ್ಗೆ, ಮಾಜಿ ಮುಖ್ಯಮಂತ್ರಿ ಹೆಚ್.ಡಿ .ಕುಮಾರಸ್ವಾಮಿ, ಜೆಡಿಎಸ್ ನಾಯಕ ನಾಸಿರ್ ಹುಸೇನ್ ಉಸ್ತಾದ್, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಡಿಎಂಕೆ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ ಸ್ಟಾಲಿನ್, ದೆಹಲಿಯ ಸಿಪಿಐ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯಚೂರಿ, ಸಿಪಿಐ ಪ್ರಧಾನ ಕಾರ್ಯದರ್ಶಿ ಅತುಲ್ ಕುಮಾರ್ ಅನ್ಜಾಜ್ ಮುಂತಾದ ಪ್ರಮುಖ ನಾಯಕರು ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಳೆ ನಡೆಯುವ ಈ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಲ್ಬುರ್ಗಿ ಸುತ್ತಮುತ್ತ ಪೋಲಿಸರು ಬಿಗಿ ಭದ್ರತೆಯನ್ನು ಕಲ್ಪಿಸಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.