download app

FOLLOW US ON >

Tuesday, August 9, 2022
Breaking News
ಸಿದ್ದರಾಮಯ್ಯ-ಖರ್ಗೆಗೆ ಅಂಬೇಡ್ಕರ್ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ : ನಟ ಚೇತನ್ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ನಾಯಕರೆಂದರೆ ನಕಲಿ ಗಾಂಧಿ ಕುಟುಂಬದ ಸದಸ್ಯರು ಮಾತ್ರ  : ಬಿಜೆಪಿನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್
English English Kannada Kannada

ಸಿನಿಪ್ರಿಯರ ಕುತೂಹಲ ಹೆಚ್ಚಿಸಿದ ‘ಅಧೀರ’ನ ಪೋಸ್ಟರ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಕೆಜಿಎಫ್‍-2 ಚಿತ್ರದ ಬಿಡುಗಡೆಗಾಗಿ ಪ್ರೇಕ್ಷಕರು ಕಾಯುತ್ತಿದ್ದಾರೆ. ಇದರ ಬೆನ್ನಲ್ಲೇ ಸಾಕಷ್ಟು ಕುತೂಹಲ ಕೆರಳಿಸಿರುವ ಈ ಚಿತ್ರದ ಮತ್ತೊಂದು ಪೋಸ್ಟರ್‍ ಸದ್ಯ ಟ್ವಿಟರ್‍ನಲ್ಲಿ ಟ್ರೆಂಡ್ ಆಗುತ್ತಿದೆ.
ಕೆಜಿಎಫ್‍-2 ಚಿತ್ರದಲ್ಲಿ ಬರಲಿರುವ “ಅಧೀರ”ನ ಪಾತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಬಾಲಿವುಡ್‍ನ ಸಂಜಯ್‍ ದತ್‍ ಅಧೀರನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಅಧೀರನ ಫಸ್ಟ್ ಲುಕ್‍ ಇರುವ ಪೋಸ್ಟರ್ ಅನ್ನು ಚಿತ್ರತಂಡ ರಿಲೀಸ್​ ಮಾಡುವ ಮೂಲಕ ಸಿನಿಮಾದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

ಇಂದು ನಟ ಸಂಜಯ್​ ದತ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಚಿತ್ರತಂಡ ಕೆಜಿಎಫ್​-2 ಚಿತ್ರದ ಪೋಸ್ಟರ್​ ರಿಲೀಸ್​ ಮಾಡಿದೆ. ಆ ಮೂಲಕ ಚಿತ್ರದಲ್ಲಿ ಅಧೀರನ ಪಾತ್ರ ಹೇಗಿರಲಿದೆ ಎಂಬ ಸಣ್ಣ ಎಳೆಯನ್ನು ಚಿತ್ರತಂಡ ಬಿಟ್ಟುಕೊಟ್ಟಿದೆ. ಅಧೀರ ಖಡ್ಗವನ್ನು ತಲೆಗೆ ಒತ್ತಿ ಕೂತಿದ್ದಾನೆ. ಅಷ್ಟೇ ಅಲ್ಲ, ಅಧೀರನ ಮುಖದ ಮೇಲೆ ದೇವನಾಗರಿ ಲಿಪಿಯಲ್ಲಿ ಏನನ್ನೋ ಬರೆಯಲಾಗಿದೆ. ಅಧೀರ ಹಾಕಿರುವ ಉಡುಗೆ ಕೂಡ ವಿಶೇವಾಗಿಯೇ ಇದೆ. ಅಧೀರನ ಪಾತ್ರದಲ್ಲಿರುವ ನಟ ಸಂಜಯ್​ ದತ್ ಅವರ ಲುಕ್​, ಸಿನಿ ರಸಿಕರನ್ನು ಆಕರ್ಷಿಸುತ್ತಿದೆ. ಟ್ವಿಟರ್ ನಲ್ಲಿ ಅಧೀರನ ಲುಕ್​ ರಿವೀಲ್​ ಮಾಡಿರುವ ನಿರ್ದೇಶಕ ಪ್ರಶಾಂತ್ ನೀಲ್, ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article