ಸೂತಕದ ನಡುವೆ ಚುನಾವಣೆ ಎದುರಿಸಬೇಕಾಗಿದೆ: ಹೆಚ್‌ಡಿಕೆ

ಬೆಂಗಳೂರು: ಶಿರಾದಲ್ಲಿ ನಾವು ಸೂತಕದ ಮನೆಯಲ್ಲಿದ್ದೇವೆ. ಹೀಗಿದ್ದೂ ನಾವು ಚುನಾವಣೆ ಎದುರಿಸಬೇಕಾದದ್ದು ನಮ್ಮ ದುರ್ವಿಧಿ. ನಾವು ನೋವಿನೊಂದಿಗೆ ಅನಿವಾರ್ಯವಾಗಿ ಚುನಾವಣೆ ಎದುರಿಸಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೋವು ವ್ಯಕ್ತಪಡಿಸಿದ್ದಾರೆ.

ಇವತ್ತು ಟ್ವೀಟ್‌ ಮಾಡಿದ ಹೆಚ್‌ಡಿಕೆ,  ಶಿರಾ ಇತರರಿಗೆ ಪ್ರತಿಷ್ಠೆಯ ಕಣವಾಗಿರಬಹುದು.  ಅವರಿಗೆ ಇದು ಲಾಭ ನಷ್ಟಗಳ ವಿಚಾರ. ಆದರೆ ನಾವು ಇಲ್ಲಿ ನೋವಿನೊಂದಿಗೆ ಗೆಲುವಿನ ಮೂಲಕ ಪರಿಹಾರ ಹುಡುಕಲು ಬಯಸುತ್ತೇವೆ ಎಂದಿದ್ದಾರೆ.

ಶಿರಾ ಮತ್ತು ರಾಜರಾಜೇಶ್ವರಿ ಕ್ಷೇತ್ರಗಳ ಚುನಾವಣೆ ದಿನಾಂಕ ಗೊತ್ತಾಗಿದ್ದು ಈ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವ ಅಚಲ ವಿಶ್ವಾಸ ಹೊಂದಿದ್ದು, ಸೂಕ್ತ ಹಾಗೂ ಸಮರ್ಥ ಅಭ್ಯರ್ಥಿಗಳನ್ನು ಶಿರಾ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳಿಗೆ ಶೀಘ್ರವಾಗಿ ಘೋಷಿಸುವುದಾಗಿ ಅವರು ಹೇಳಿದ್ದಾರೆ.

ಶಿರಾ ತಾವು ಗೆದ್ದ ಕ್ಷೇತ್ರವೂ ಹೌದು, ಸತ್ಯನಾರಾಯಣ ಅವರು ಇಲ್ಲಿ ಗೆದ್ದಿದ್ದರು. ಬಿಜೆಪಿ ಅಮಿಷಕ್ಕೆ ಒಳಗಾಗದೆ ಕ್ಷೇತ್ರವನ್ನು ಜೆಡಿಎಸ್ ಗೆ ಉಳಿಸಿಕೊಟ್ಟಿದ್ದರು. ನ್ಯಾಯಬದ್ಧವಾಗಿ ಶಿರಾ ನಾವೇ ಗೆಲ್ಲಬೇಕಾದ ಕ್ಷೇತ್ರವೆಂದು ಹೇಳಿದ್ದಾರೆ.

Latest News

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.

ಮಾಹಿತಿ

ITR ಸಲ್ಲಿಕೆ ಗಡುವು ಜುಲೈ 31 ಅಂತ್ಯ ; ದಂಡ ಶುಲ್ಕವಿಲ್ಲದೆ ಯಾರೆಲ್ಲಾ ITR ಸಲ್ಲಿಸಬಹುದು ಗೊತ್ತಾ?

ಗಡುವು ಮುಗಿದರೂ ಯಾರೆಲ್ಲ ದಂಡ ಶುಲ್ಕವಿಲ್ಲದೆ ಐಟಿಆರ್‌ ಸಲ್ಲಿಸಬಹುದು, ಇದಕ್ಕೆ ಸಂಬಂಧಿಸಿದಂತೆ ನಿಯಮ ಏನು ಹೇಳುತ್ತದೆ ಎನ್ನುವ ವಿವರ ಇಲ್ಲಿದೆ. ಮುಂದೆ ಓದಿ,