ಕುಂದಾಪುರ: ನಮ್ಮ ರಾಜ್ಯದಲ್ಲಿ ಭ್ರಷ್ಟಾಚಾರ ಯಾವ ಮಟ್ಟಕ್ಕೆ ಹೆಚ್ಚಿದೆ ಅಂದ್ರೆ ಇತ್ತೀಚೆಗೆ ನಿರ್ಮಾಣಗೊಂಡ ಸೇತುವೆ ಇಬ್ಭಾಗವಾಗಿ ಜನರಲ್ಲಿ ಆತಂಕ ಮೂಡಿಸಿದೆ. ಅಧಿಕಾರಿಗಳ ಕಮಿಷನ್ ದಂಧೆಯಿಂದಾಗಿ ಕಳಪೆ ಗುಣಮಟ್ಟದ ಕಾಮಕಾರಿ ನಡೆದ ಪರಿಣಾಮ ಬೈಂದೂರು – ಕುಂದಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿ 66ರ ಹೊಸ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡ ಕಾರಣ ಜನ ಭಯಭೀತರಾಗಿದ್ದಾರೆ.
ಬೈಂದೂರಿನಿಂದ ಕುಂದಾಪುರ ಕಡೆಗೆ ಸಂಚರಿಸುವ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದು ಹೊಸದಾಗಿ ನಿರ್ಮಾಣಗೊಂಡಿದ್ದ ಸೇತುವೆ, ಆದ್ರೆ ಈ ರೀತಿ ಬಿರುಕು ಕಾಣಿಸಿಕೊಂಡಿದ್ದು ಜನರ ಭಾರೀ ಆಕ್ರೋಶಕ್ಕೂ ಕಾರಣವಾಗಿದೆ.
ಹೊಸ ಸೇತುವೆ ನಿರ್ಮಾಣವಾದ ನಂತರ ಬೈಂದೂರಿನಿಂದ ಕುಂದಾಪುರ ಕಡೆಗೆ ಸಂಚರಿಸುವ ವಾಹನಗಳಿಗೆ ಈ ಸೇತುವೆಯಲ್ಲಿ ಮತ್ತು ಕುಂದಾಪುರದಿಂದ ಬೈಂದೂರು ಕಡೆಗೆ ಹೋಗುವ ವಾಹನಗಳಿಗೆ ಹಳೇ ಸೇತುವೆಯಲ್ಲಿ ಸಂಚರಿಸಲು ಅವಕಾಶ ಮಾಡಿಕೊಡಲಾಗಿತ್ತು.
ಹೊಸ ಸೇತುವೆಯಲ್ಲಿ ಬಿರುಕು ಕಂಡುಬಂದ ಹಿನ್ನಲೆಯಲ್ಲಿ ಈಗ ಹಳೆಯ ಸೇತುವೆ ಮೂಲಕ ಎರಡು ಕಡೆಗಳ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.