ಸ್ವಪಕ್ಷದವರ ಮೇಲೆಯೇ ಕಿಡಿ ಕಾರಿದ ಶಾಸಕ ಬಸನಗೌಡ ಪಾಟೀಲ್ ..!

ಬೆಂಗಳೂರು.ಅ.01: ಸಿಎಂ ಯಡಿಯೂರಪ್ಪ ಅವರನ್ನು ಕೇಂದ್ರ ನಾಯಕರು ಟಾರ್ಗೆಟ್ ಮಾಡುತ್ತಿದ್ದಾರೆ. ಸಿಎಂ‌ ಅವರನ್ನು ಟಾರ್ಗೆಟ್ ಮಾಡಲು ರಾಜ್ಯಕ್ಕೆ ನೆರೆ ಪರಿಹಾರ ಬಿಡುಗಡೆ ಮಾಡುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ ಕಾರಿದ್ದಾರೆ.

ಇಡೀ ಉತ್ತರ ಕರ್ನಾಟಕದ ಜನ ನೆರೆ ಪರಿಹಾರ ಸಿಗದೆ ಪರದಾಡುತ್ತಾ ಇದ್ದಾರೆ. ಈ ವೇಳೆ ಪ್ರಧಾನಿ ಮೋದಿಯವರು ಬಿಹಾರದ ನೆರೆ ಸಂತ್ರಸ್ತರ ಬಗ್ಗೆ ಟ್ವೀಟ್ ಮಾಡ್ತಾರೆ ಅಂದ್ರೆ ನಮ್ಮ ಜನ ಏನು ಮಾಡಿದ್ದಾರೆ?. ಜನರಿಗೆ ನಾವೇನು ಉತ್ತರ ಕೊಡಬೇಕು?. ಸಾಮಾಜಿಕ ಜಾಲತಾಣಗಳಲ್ಲಿ ಜನ ನಮ್ಮ ವಿರುದ್ಧ ಪ್ರಶ್ನೆ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.

ಕೇಂದ್ರಕ್ಕೆ ನಮ್ಮ ಒಂದು ನಿಯೋಗ ಕೊಂಡೊಯಿರಿ. ನಾವು ಮಾತಾಡುತ್ತೇವೆ. ಹಿಂದೆ ನಾನೂ ಸಂಸದನಾಗಿದ್ದವನು. ನನಗೂ ಎಲ್ಲ ಅನುಭವ ಇದೆ. ನಮ್ಮ ಸಂಸದರು ಅದನ್ನು ಪ್ರಶ್ನೆ ಮಾಡಬೇಕು ಎಂದು ಕೇಂದ್ರ ನಾಯಕರ ವಿರುದ್ಧ ಹಾಗೂ ರಾಜ್ಯದ ಸಂಸದರ ವಿರುದ್ಧ ಯತ್ನಾಳ್ ನೇರ ವಾಗ್ದಾಳಿ ನಡೆಸಿದರು.

ಇದೇ ವೇಳೆ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧವೂ ಯತ್ನಾಳ್ ವಾಗ್ದಾಳಿ ನಡೆಸಿದರು. ಅಲ್ಲದೆ ಸಂಸದ ತೇಜಸ್ವಿ ಸೂರ್ಯನ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ಎಸಿ ರೂಮಿನಲ್ಲಿ‌ ಕೂತು ಪಕ್ಷ ಕಟ್ಟುವುದಲ್ಲ. ಹಳ್ಳಿ ಹಳ್ಳಿ ಅಲೆದು ಪಕ್ಷ ಕಟ್ಟಿರುವರು ನಾವು. ಇಂಗ್ಲಿಷ್ ಬಂದ ಮಾತ್ರಕ್ಕೆ ಅಂತಾರಾಷ್ಟ್ರೀಯ ನಾಯಕರಾಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Latest News

ದೇಶ-ವಿದೇಶ

‘ಡಾನಿ’ ಬುಡಕಟ್ಟು ಜನಾಂಗದಲ್ಲಿ ಬೆರಳನ್ನು ಕತ್ತರಿಸುವುದೇ ಸಂಪ್ರದಾಯವಂತೆ!

ಇಂಡೋನೇಷ್ಯಾದ, ಪಪುವಾ ಗಿನಿಯಾ ದ್ವೀಪದಲ್ಲಿ ವಾಸಿಸುವ ಎಲ್ಲಾ ಡಾನಿ ಬುಡಕಟ್ಟಿನ ಮಹಿಳೆಯರನ್ನು ಕತ್ತರಿಸಿದ ಬೆರಳುಗಳಿಂದ ಬದುಕಲು ಒತ್ತಾಯಿಸಲಾಗುತ್ತದೆ.

ರಾಜಕೀಯ

`ನನ್ನಲ್ಲೂ ದಾಖಲೆಗಳಿವೆ ; `ಸರ್ಟಿಫಿಕೇಟ್ ಕೋರ್ಸ್ʼಗಿಂತ ಬೃಹತ್ ಚಾಪ್ಟರ್ 1, 2, 3 ಆಗುತ್ತವೆ, ಬಿಚ್ಚಲೇ? : ಹೆಚ್.ಡಿಕೆ

ಕಟ್ಟಡಗಳ ಹೆಸರಿನಲ್ಲಿ ಕಮೀಷನ್ ಕಾಂಚಾಣ, ಅಧಿಕಾರಿಗಳನ್ನು ಒಳಕ್ಕೆ ಹಾಕಿಕೊಂಡು ಡೀಲ್ ಮಾಡುವ ಅಶ್ವತ್ ನಾರಾಯಣ್, ಇದೇನಾ ನೀವು ನೀಡುತ್ತಿರುವ ಉನ್ನತ ಶಿಕ್ಷಣ?

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ