Visit Channel

ಹತ್ರಸ್‍ ಅತ್ಯಾಚಾರ ಪ್ರಕರಣ: ಎಫ್‍ಐಆರ್ ದಾಖಲಿಸಿದ ಸಿಬಿಐ

hathras

ಉತ್ತರ ಪ್ರದೇಶ: ಇತ್ತಿನ ಹತ್ರಸ್‌ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರೀಯ ತನಿಖಾ ದಳ (ಸಿಬಿಐ) ಘಾಜಿಯಾಬಾದ್ ಎಸಿಬಿ ಪೊಲೀಸ್ ಠಾಣೆಯಲ್ಲಿ ಭಾನುವಾರ ಎಫ್‌ಐಆರ್ ದಾಖಲಿಸಿದೆ.

ಈ ಹಿಂದೆ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಉತ್ತರಪ್ರದೇಶ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿತ್ತು. ಈ ಶಿಫಾರಸ್ಸನ್ನು ಅಂಗೀಕರಿಸಿರುವ ಕೇಂದ್ರ ತನಿಖಾ ಸಂಸ್ಥೆಯು ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡು ಪ್ರಕರಣವನ್ನು ವಹಿಸಿಕೊಂಡಿದೆ.

ದೆಹಲಿಯಲ್ಲಿ 2012ರಲ್ಲಿ ನಡೆದ ಭೀಕರ ನಿರ್ಭಯ ಸಾಮೂಹಿಕ ಅತ್ಯಾಚಾರವನ್ನು ನೆನಪಿಸುವಂತಹ ಉತ್ತರ ಪ್ರದೇಶದ ಹತ್ರಸ್‌ನಲ್ಲಿ ಸೆ. 14ರಂದು ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವು ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಯುವತಿಯನ್ನು ಜಮೀನಿನಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿದ್ದ ದುರುಳರು ಆಕೆಯ ದೇಹದ ಮೂಳೆಗಳು ಮುರಿಯುವಂತೆ, ನಾಲಗೆ ತುಂಡಾಗುವಂತೆ ಹಲ್ಲೆ ನಡೆಸಿದ್ದರು. ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ದೆಹಲಿಯ ಸಫ್ದಾರ್ ಜಂಗ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.