Visit Channel

ಹತ್ರಾಸ್ ಕಿಚ್ಚು: ರಾಹುಲ್ ಗಾಂಧಿ, ಪ್ರಿಯಾಂಕಾ ಅರೆಸ್ಟ್‌

ರಾಹುಲ್

ನವದೆಹಲಿ: ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಸಂತ್ರಸ್ಥ ಯುವತಿಯ ಕುಟುಂಬಸ್ಥರನ್ನು ಭೇಟಿ ಮಾಡಲು ಉತ್ತರ ಪ್ರದೇಶದ ಹತ್ರಾಸ್ ಗೆ ತೆರಳುತ್ತಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹತ್ರಾಸ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರ ಕಾರನ್ನು ಗ್ರೇಟರ್ ನೋಯ್ಡಾದಲ್ಲಿಯೇ ಉತ್ತರ ಪ್ರದೇಶ ಪೊಲೀಸರು ತಡೆದರು. ಬಳಿಕ ಸಂತ್ರಸ್ಥ ಯುವತಿಯ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಕಾಲ್ನಡಿಯಲ್ಲಿ ತೆರಳುತ್ತಿದ್ದ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಾರಿ ಬಿದ್ದ ರಾಹುಲ್‌: ದೆಹಲಿಯಿಂದ ಹತ್ರಾಸ್‌ ವರೆಗೆ ಪಾದಯಾತ್ರೆ ಮಾಡುತ್ತಿದ್ದಾಗ ಪೊಲೀಸರು ಪ್ರತಿಭಟನಾಕಾರರ ನಡುವೆ ಜಟಾಪಟಿ ನಡೆದಾಗ ರಾಹುಲ್‌ ಜಾರಿ ಕೆಳಗೆ ಬಿದ್ದ ಘಟನೆಯೂ ನಡೆಯಿತು.

ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ, “ಕಳೆದ ವರ್ಷ ಇದೇ ಸಮಯದಲ್ಲಿ ನಾವು ಉನ್ನಾವೊ ಮಗಳಿಗಾಗಿ ಹೋರಾಡುತ್ತಿದ್ದೆವು. ಒಂದು ವರ್ಷದಲ್ಲಿ ಯುಪಿಯ ಪರಿಸ್ಥಿತಿ ಬದಲಾಗಿಲ್ಲ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಹಿಳೆಯರ ಸುರಕ್ಷತೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಹತ್ನಾಸ್ ನಲ್ಲಿ 19 ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದ್ದು, ಹೀನ ಕೃತ್ಯಕ್ಕೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.