ದೆಹಲಿ, ಅ. 27: ಹಬ್ಬಗಳ ಸೀಸನ್ ಹಿನ್ನೆಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರ, ಕರ್ನಾಟಕ, ಪಶ್ಚಿಮ ಬಂಗಾಳ, ದೆಹಲಿ ಹಾಗೂ ಕೇರಳ ರಾಜ್ಯಗಳಲ್ಲಿ ಕೋವಿಡ್ನಿಂದ ಶೇಕಡ 58ರಷ್ಟು ಸಾವುಗಳು ಸಂಭವಿಸಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.
ಕಳೆದ 13 ದಿನಗಳಲ್ಲಿ 10 ಲಕ್ಷ ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿರುವುದು ಉತ್ತಮ ಬೆಳವಣಿಗೆ ಎಂದಿದ್ದಾರೆ. ಕರ್ನಾಟಕ ಸೇರಿ ಐದು ರಾಜ್ಯಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಳವಾಗಿದೆ ಎಂದು ಅವರು ತಿಳಿಸಿದ್ದಾರೆ.
ಬ್ರೆಜಿಲ್, ದಕ್ಷಿಣ ಆಫ್ರಿಕಾ ಮತ್ತು ಅಮೆರಿಕಾದಲ್ಲಿ ಕೊರೊನಾ ಲಸಿಕೆ ಪ್ರಯೋಗ ನಡೆಯುತ್ತಿದೆ. ಭಾರತದಲ್ಲಿ ಮೂರನೇ ಹಂತದ ಪ್ರಯೋಗಗಳಿಗೆ ಅನುಮೋದನೆ ದೊರೆತಿದೆ ಎಂದು ಐಸಿಎಂಆರ್ನ ಡಿಜಿ ಬಲರಾಮ್ ಭಾರ್ಗವ ಹೇಳಿದರು.