ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನ ಬರ್ಬರ ಹತ್ಯೆ

ಮಂಗಳೂರು,ಸೆ.04: ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನನನ್ನ  ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಸಂಪ್ಯ ಪೊಲೀಸ್ ಠಾಣೆ ಎದುರಲ್ಲಿ ಈ ಘಟನೆ ನಡೆದಿದೆ. ಹಿಂಜಾವೇ ತಾಲ್ಲೂಕು ಕಾರ್ಯದರ್ಶಿ ಕಾರ್ತಿಕ್ ಮೇರ್ಲ (30) ಕೊಲೆಯಾದ ವ್ಯಕ್ತಿ.  ಸಂಪ್ಯ ಪೊಲೀಸ್ ಠಾಣೆ ಮುಂಭಾಗ ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತಿತ್ತು. ಈ ನಡುವೆ ಕಾರ್ತಿಕ್ ಮೇರ್ಲ ನನ್ನ ದುಷ್ಕರ್ಮಿಗಳು ಸಾರ್ವಜನಿಕರ ಎದುರೇ ಯುವಕನನ್ನು ಕೊಚ್ಚಿ ಹಾಕಿದ್ದಾರೆ.

ಕಾರ್ತಿಕ್  ಖಾಸಗಿ ಫೈನಾನ್ಸ್ ಸಂಸ್ಥೆಯಿಂದ ಹಣ ಪಡೆದಿದ್ದನು. ಇದೇ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ ಎನ್ನಲಾಗಿದೆ. ದಕ್ಷಿಣ ಕನ್ನಡ  ಜಿಲ್ಲೆಯ ಪುತ್ತೂರು ಗ್ರಾಮಾಂತರ ಠಾಣೆ  ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Latest News

ದೇಶ-ವಿದೇಶ

“ನಮ್ಮ ಮೆಸ್ ಊಟವನ್ನು ಪ್ರಾಣಿಗಳೂ ಸಹ ತಿನ್ನಲು ಸಾಧ್ಯವಿಲ್ಲ”; ಕಣ್ಣೀರಿಟ್ಟ ಪೇದೆ, ವೀಡಿಯೋ ವೈರಲ್

ಅಷ್ಟೇ ಅಲ್ಲದೇ ನನ್ನನ್ನು ಕೆಲಸದಿಂದ ವಜಾಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ದಾರಿಹೋಕರ ಬಳಿ ಮನೋಜ್ ಕುಮಾರ್ ಅಳಲು ತೋಡಿಕೊಂಡಿದ್ದಾರೆ.

ದೇಶ-ವಿದೇಶ

ರೇಷನ್ ಕಾರ್ಡ್ ಹೊಂದಿರುವ ಬಡವರಿಗೆ ರಾಷ್ಟ್ರಧ್ವಜ ಖರೀದಿಸುವಂತೆ ಒತ್ತಾಯಿಸುತ್ತಿದ್ದಾರೆ : ರಾಹುಲ್ ಗಾಂಧಿ

ಇದು ಬಿಜೆಪಿ ಸರ್ಕಾರದ ಪ್ರಚಾರ ಪಿತೂರಿ. ಈ ರೀತಿ ಮಾಡುವ ಮೂಲಕ ಬಿಜೆಪಿಯು “ರಾಷ್ಟ್ರೀಯತೆ”ಯನ್ನು ಮಾರಾಟ ಮಾಡುತ್ತಿದೆ ಮತ್ತು ಬಡವರ ಆತ್ಮಗೌರವಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿದ್ದಾರೆ.

ರಾಜಕೀಯ

`ಬ್ಲ್ಯಾಕ್‌ ಮೇಲ್‌ ಕುಮಾರಸ್ವಾಮಿʼ ; ಕಣ್ಣೀರ ಕೋಡಿಯಿಂದ ಕುಟುಂಬಕ್ಕೆ ಲಾಭವೇ ಹೊರತು ಜನತೆಗೇನು ಲಾಭ? : ಅಶ್ವಥ್ ನಾರಾಯಣ್‌

ನೀವು ಈವರೆಗೆ ಹೇಳಿದ ಸುಳ್ಳುಗಳನ್ನು ಎಣಿಸಲು ಸಾಧ್ಯವೇ? ಎಂದು ಸಚಿವ(Minister) ಅಶ್ವಥ್‌ ನಾರಾಯಣ್(Ashwath Narayan) ಪ್ರಶ್ನಿಸಿದ್ದಾರೆ.

ದೇಶ-ವಿದೇಶ

ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದ ಭಾರತೀಯ ಸೇನೆ ; ದಾಳಿಯಲ್ಲಿ ಮೂವರು ಯೋಧರು ಹುತಾತ್ಮ!

ಸ್ವಾತಂತ್ರ್ಯ ದಿನಾಚರಣೆ(Independence Day) ಸಂದರ್ಭದಲ್ಲಿ ಉಗ್ರರು ದೇಶದ ವಿವಿಧ ಭಾಗಗಳಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.