ಕೊಲ್ಕತ್ತಾ ಅ. 14: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಹಿರಿಯ ನಟ ಸೌಮಿತ್ರ ಚಟರ್ಜಿಯವರ ದಿನೇ ದಿನೇ ಕ್ಷಿಣಿಸುತ್ತಿದ್ದು, ಇಂದು ತೀರಾ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಖ್ಯಾತ ಬಂಗಾಳಿ ನಟ ಸೌಮಿತ್ರ ಚಟರ್ಜಿ ಭಾನುವಾರ ಮಧ್ಯಾಹ್ನದಿಂದಲೂ ಜ್ವರದಿಂದ ಬಳಲುತ್ತಿದ್ದು, ಬುಧವಾರ ಮತ್ತೊಂದು ಪರೀಕ್ಷೆ ನಡೆಸಲು ವೈದ್ಯರು ನಿರ್ಧರಿಸಿದ್ದಾರೆ.
ಹಿರಿಯ ನಟ ಸೌಮಿತ್ರ ಚಟರ್ಜಿಯವರು ಸತ್ಯಜಿತ್ ರೇ, ಮೃಣಾಲ್ ಸೇನ್, ತಪನ್ ಸಿನ್ಹಾ ಮತ್ತು ತರುಣ್ ಮಜುಮ್ದಾರ್‌ರಂತಹ ಘಟಾನುಘಟಿಗಳೊಂದಿಗೆ ಕೆಲಸ ಮಾಡಿದ ಅಪರೂಪದ ಖ್ಯಾತಿಯನ್ನು ಗಳಿಸಿದ್ದಾರೆ. ಅಕ್ಟೋಬರ್ 6 ರಂದು ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು, ಈಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, 15 ವೈದ್ಯರ ತಂಡ ಆಸ್ಪತ್ರೆಯಲ್ಲಿ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.