ಬೆಂಗಳೂರು, ನ. 19: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರ ಮಹದೇವ ಪ್ರಕಾಶ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ವೈಯಕ್ತಿಕ ಕಾರಣಕ್ಕಾಗಿ ರಾಜೀನಾಮೆ ನೀಡಿರುವುದಾಗಿ ಹೇಳಿರುವ ಮಹದೇವ ಪ್ರಕಾಶ್ ನಿನ್ನೆಯೇ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಗಳಿಗೆ ಸಲ್ಲಿಸಿದ್ದಾರೆ. ತಾವು ನೀಡಿದ್ದ ಮಾಧ್ಯಮ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ಕಳೆದ ಒಂದು ವರ್ಷದಿಂದ ನೀಡಿದ್ದ ಅವಕಾಶಕ್ಕೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.