Visit Channel

ಹುಸಿಯಾದ ಕೇಂದ್ರ ಸಚಿವರ ಭರವಸೆ: ಟಿ. ಎಸ್‌ ನಾಗಾಭರಣ

nagabharana1600139221

ಬೆಂಗಳೂರು, ಅ. 29: ಬ್ಯಾಂಕಿಂಗ್ ಸೇವೆಗಳಿಗೆ ಸಂಬಂಧಿಸಿದ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ರಾಜ್ಯ ಭಾಷೆಗಳಲ್ಲಿ ನಡೆಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಿರಂತರವಾಗಿ ಒತ್ತಾಯಿಸುತ್ತಿದ್ದು, ಈ ಸಂಬಂಧ  ಹಲವು ಭಾರಿ ಕೇಂದ್ರ ವಿತ್ತ ಸಚಿವರನ್ನು ಖುದ್ದು ಭೇಟಿ ನೀಡಿ ಮನವಿಗಳನ್ನು, ಕೋರಿಕೆಗಳನ್ನು ಸಲ್ಲಿಸಲಾಗಿದ್ದರೂ ಸಹ ಹಳೆಯ ಮಾರ್ಗಸೂಚಿಗಳನ್ವಯ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿರುವ ಐಬಿಪಿಎಸ್‌ನ ಕ್ರಮ ಖಂಡನಾರ್ಹವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರವು ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳನ್ನು ಬರೆಯಲು ಅನುವು ಮಾಡಿಕೊಡುವಂತೆ ಮನವಿ ಮಾಡಲಾಗಿದ್ದ ಹಿನ್ನೆಲೆಯಲ್ಲಿ ಕನ್ನಡದಲ್ಲಿ ಪರೀಕ್ಷೆಗಳನ್ನು ನಡೆಸುವುದಾಗಿ ಕೇಂದ್ರ ಸಚಿವರು ಭರವಸೆಗಳನ್ನು ನೀಡಿದ್ದರು. ಆದರೆ ಕೇಂದ್ರ ಸಚಿವರ ಭರವಸೆಗಳು ಹುಸಿಯಾಗಿದ್ದು, ಬ್ಯಾಂಕಿಂಗ್ ಕ್ಷೇತ್ರದ ಉದ್ಯೋಗಗಳು ಕನ್ನಡಿಗರ ಕೈ ತಪ್ಪುತ್ತಿರುವುದು ಅತ್ಯಂತ ನೋವಿನ ವಿಷಯವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಬ್ಯಾಂಕಿಂಗ್ ನೇಮಕಾತಿಗೆ ಸಂಬಂಧಿಸಿದಂತೆ ಕನ್ನಡವು ಸೇರಿದಂತೆ ಎಲ್ಲ ರಾಜ್ಯಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರಲ್ಲಿ ಮನವಿ ಮಾಡಿದ್ದಾರೆ.

ಸಂವಿಧಾನದ ಪರಿಚ್ಛೇದ-8ರಲ್ಲಿ ಎಲ್ಲ ರಾಜ್ಯಭಾಷೆಗಳಿಗೂ ಮಾನ್ಯತೆ ನೀಡುವಂತೆ ವಿವರಿಸಲಾಗಿದೆ. ಹಾಗಾಗಿ ಬ್ಯಾಂಕಿಂಗ್ ನೇಮಕಾತಿಗೆ ಐಬಿಪಿಎಸ್ ನಡೆಸುವ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸುವಂತೆ ನಿರ್ದೇಶನ ನೀಡಬೇಕೆಂದು ಕೇಂದ್ರ ಸಚಿವರಿಗೆ ಬರೆಯಲಾಗಿರುವ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ಹೀಗಿದ್ದರೂ ಮುಂದಿನ ಜನವರಿಯಲ್ಲಿ ನಡೆಯಲಿರುವ ಬ್ಯಾಂಕಿಂಗ್ ಪರೀಕ್ಷೆಗಳನ್ನು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ನಡೆಸಲು ಐಬಿಪಿಎಸ್ ಸಿದ್ಧತೆ ನಡೆಸುತ್ತಿರುವುದರಿಂದ ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರುವ ಅಭ್ಯರ್ಥಿಗಳಿಗೆ ಅನ್ಯಾಯವಾಗಲಿದ್ದು, ಕನ್ನಡದಲ್ಲಿ ಪರೀಕ್ಷೆಗಳನ್ನು ನಡೆಸುವಂತೆ ಐಬಿಪಿಎಸ್ಗೆೆ ನಿರ್ದೇಶನ ನೀಡುವಂತೆ ಒತ್ತಾಯಿಸಿದ್ದಾರೆ.

ಗ್ರಾಮ್ಯ ಮಟ್ಟದಲ್ಲೂ ಬ್ಯಾಂಕಿಂಗ್ ಸೌಲಭ್ಯವಿರುವುದರಿಂದ ಗ್ರಾಮೀಣರಿಗೆ ಸ್ಥಳೀಯ ಭಾಷೆಯಲ್ಲಿ ಮಾತ್ರ ಸಂವಹನ ನಡೆಸಲು ಸಾಧ್ಯವಿರುತ್ತದೆ. ಹಾಗಾಗಿ ರಾಜ್ಯಭಾಷೆಗಳ ಪ್ರಾವೀಣ್ಯತೆಗೆ ಸಂಬಂಧಿಸಿದಂತೆ ಹೊಸ ಮಾನದಂಡಗಳನ್ನು ರೂಪಿಸಿ ಕನ್ನಡವೂ ಸೇರಿದಂತೆ ಎಲ್ಲ ರಾಜ್ಯಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳನ್ನು ನಡೆಸುವಂತೆ ಆಗ್ರಹಿಸಿದ್ದಾರೆ

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.