ಹಾಸ್ಯ ಹಾಗೂ ಪೋಷಕ ಪಾತ್ರಗಳಲ್ಲಿ ಮಿಂಚಿ ಜನರ ಮನಸ್ಸು ಕದ್ದಿದ್ದ ನಟ ರಾಕ್ ಲೈನ್ ಸುಧಾಕರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೆ ಎಂ ಶಶಿಧರ್ ನಿರ್ದೇಶನ ಹಾಗೂ ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣದ ಶುಗರ್ ಲೆಸ್ ಸಿನಿಮಾದ ಶೂಟಿಂಗ್ ಸಂದರ್ಭದಲ್ಲೇ ಹಿರಿಯ ನಟ ರಾಕ್ ಲೈನ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ..
ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ಚಮಕ್ , ಟೋಪಿವಾಲಾ ಜೂಮ್ , ಅಜಿತ್ , ಪಟಾಕಿ ಸೇರಿದಂತೆ ಸುಮಾರು ೫೦ ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಮಿಂಚಿದ್ದ ಹಿರಿಯ ನಟ ರಾಕ್ ಲೈನ್ ಸುಧಾಕರ್ ಸಾವು ಇಡೀ ಕನ್ನಡ ಚಿತ್ರರಂಗಕ್ಕೆ ದೊಡ್ಡ ಆಘಾತ ನೀಡಿದೆ .
ಇನ್ನು ಇವರಿಗೆ ಕೆಲ ದಿನಗಳ ಹಿಂದೆ ಕೊರೋನಾ ಕಾಣಿಸಿಕೊಂಡಿದ್ದು ಚಿಕಿತ್ಸೆಯನ್ನು ಪಡೆದಿದ್ದರು . ಸಂಪೂರ್ಣ ಕೊರೋನಾ ಗುಣಮುಖರಾಗಿರೋ ಹಿನ್ನಲೆ ಸುಧಾಕರ್ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದು .. ಗುರುವಾರ ಏಕಾಏಕಿ ಎದೆ ನೋವು ಕಾಣಿಸಿಕೊಂಡು ಸೆಟ್ ನಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ .