ʻಟ್ರಬಲ್‌ ಶೂಟರ್‌ʼ ಡಿಕೆಶಿಗೆ ಮತ್ತೊಂದು ಟ್ರಬಲ್‌

ಬೆಂಗಳೂರು, ಅಕ್ಟೋಬರ್ 05: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ನಡೆದಿದೆ. 60ಕ್ಕೂ ಹೆಚ್ಚು ಅಧಿಕಾರಿಗಳು ಸದಾಶಿವನಗರ, ಕನಕಪುರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದಾಳಿ ನಡೆಸಿದ್ದಾರೆ.

ಡಿ. ಕೆ. ಶಿವಕುಮಾರ್ ನಿವಾಸದ ಮೇಲೆ ನಡೆದ ಸಿಬಿಐ ದಾಳಿಯನ್ನು ಖಂಡಿಸಿದ್ದಾರೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, “ಸಿಬಿಐ ದಾಳಿಯನ್ನು ಖಂಡಿಸುತ್ತೇನೆ” ಎಂದು ಹೇಳಿದ್ದಾರೆ.

“ವಿಧಾನಸಭಾ ಉಪ ಚುನಾವಣೆಗೆ ನಾವು ಮಾಡಿಕೊಂಡ ತಯಾರಿಯ ದಾರಿ ತಪ್ಪಿಸುವ ಉದ್ದೇಶ ಸಿಬಿಐ ದಾಳಿಯ ಹಿಂದಿದೆ” ಎಂದು ಸಿದ್ದರಾಮ್ಯಯ ಆರೋಪ ಮಾಡಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸಹ ಸಿಬಿಐ ದಾಳಿಯನ್ನು ಖಂಡಿಸಿದೆ.

ಸೋಮವಾರ ಡಿ. ಕೆ. ಶಿವಕುಮಾರ್ ಸದಾಶಿವನಗರದ ನಿವಾಸ, ಕನಕಪುರ ನಿವಾಸ ಮತ್ತು ಡಿ. ಕೆ. ಸುರೇಶ್ ನಿವಾಸದ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ. ಡಿ. ಕೆ. ಶಿವಕುಮಾರ್ ಅಭಿಮಾನಿಗಳು ಸದಾಶಿವನಗರ ನಿವಾಸಕ್ಕೆ ಆಗಮಿಸುತಿದ್ದಾರೆ.

ಡಿ. ಕೆ. ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ನಡೆಸಲು 2019ರ ಸೆಪ್ಟೆಂಬರ್ 25ರಂದು ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.

ಇದನ್ನು ಪ್ರಶ್ನಿಸಿ ಡಿ. ಕೆ. ಶಿವಕುಮಾರ್ ಕರ್ನಾಟಕ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ಇನ್ನೂ ನಡೆಯಬೇಕಿದೆ. ಅಷ್ಟರಲ್ಲಿಯೇ ಸಿಬಿಐ ದಾಳಿಯಾಗಿದೆ.ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಾಗದ ಬಿಜೆಪಿ ನೈತಿದ ದಿವಾಳಿತನವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

Exit mobile version