ನವದೆಹಲಿ, ನ.11: ಆನ್ಲೈನ್ನಲ್ಲಿ ಪ್ರಸಾರವಾಗುವ ಚಲನಚಿತ್ರಗಳು ಧ್ವನಿಮುದ್ರಿಕೆಗಳು, ನ್ಯೂಸ್ ಮತ್ತು ಪ್ರಚಲಿತ ವಿದ್ಯಮಾನಗಳು ಇನ್ನು ಮುಂದೆ ವಾರ್ತಾ ಇಲಾಖೆ ವ್ಯಾಪ್ತಿಗೆ ಒಳಪಡಲಿವೆ. ದೇಶ-ವಿದೇಶಗಳ ಚಲನಚಿತ್ರಗಳು ಪ್ರಸಾರವಾಗುವ ಅಂತಾರಾಷ್ಟ್ರೀಯ ಖ್ಯಾತಿಯ ನೆಟ್ಫಿಕ್ಸ್ ಮತ್ತಿತರ ಜಾಲ ತಾಣಗಳು ಇನ್ನು ಮುಂದೆ ವಾರ್ತಾ ಇಲಾಖಾ ವ್ಯಾಪ್ತಿಗೆ ಒಳಪಡಿಸುವ ಮಹತ್ವದ ತೀರ್ಮಾನವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಈ ಮೂಲಕ ಆನ್ ಲೈನ್ ನ್ಯೂಸ್ ಪೋರ್ಟಲ್ ಮಾಲೀಕರಿಗೆ ಗುಡ್ ನ್ಯೂಸ್ ನೀಡಿದೆ.
ಸರ್ಕಾರದ ಈ ತೀರ್ಮಾನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಹಿ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಆನ್ಲೈನ್ನಲ್ಲಿ ಅಡೆ ತಡೆ ಇಲ್ಲದೆ ಪ್ರಸಾರವಾಗುವ ಮಾಹಿತಿಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಮಹತ್ವದ ತೀರ್ಮಾನ ಕೈಗೊಂಡಿದೆ ಎಂದು ಹೇಳಲಾಗಿದೆ.
ಈ ಅಧಿಸೂಚನೆಯು ನೆಟ್ ಫ್ಲಿಕ್ಸ್ ಮತ್ತು ಅಮೆಜಾನ್ ಪ್ರೈಮ್ ವಿಡಿಯೋದಂತಹ ಒಟಿಟಿ ಪ್ಲಾಟ್ ಫಾರ್ಮ್ ಗಳನ್ನು ಪರಿಣಾಮಕಾರಿಯಾಗಿ ಆನ್ ಲೈನ್ ಸುದ್ದಿ ಪೋರ್ಟಲ್ಗಳ ಜೊತೆಗೆ ಕೇಂದ್ರ ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ನೇತೃತ್ವ ಹೊಂದಿದೆ.