ಆರ್‌.ಆರ್‌ ನಗರ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಕಣಕ್ಕೆ

ಬೆಂಗಳೂರು ಅ.13:  ಆರ್​.ಆರ್​ ನಗರ ಉಪಚುನಾವಣೆಯ ಅಖಾಡಕ್ಕೆ ಜೆಡಿಎಸ್​ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ. ಕೃಷ್ಣಮೂರ್ತಿ ಅವರನ್ನು ಜೆಡಿಎಸ್​ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ. ಹಾಗೆಯೇ  ಕೃಷ್ಣಮೂರ್ತಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.  ಟಿಕೆಟ್ ಘೋಷಣೆ ಮಾಡಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳು ನಮಗೆ ವಿರೋಧಿಗಳು. ಎರಡು ಪಕ್ಷದ ವಿರುದ್ಧ ನಮ್ಮ ಹೋರಾಟ ನಡೆಯಲಿದೆ. ಕಳೆದ ಎರಡು ಚುನಾವಣೆ ವಿಭಿನ್ನ ರೀತಿಯದಾಗಿದೆ. ಈ ಬಾರಿಯ ಚುನಾವಣೆ ಕಳೆದ ಬಾರಿಗಿಂತ ವಿಭಿನ್ನವಾಗಿರುತ್ತದೆ ಎನ್ನುವ ವಿಶ್ವಾಸವಿದೆ. ಕೃಷ್ಣಮೂರ್ತಿ ಅವರ ತಂದೆ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತ.

2008 ಚುನಾವಣೆಯಲ್ಲಿ ಕೃಷ್ಣಮೂರ್ತಿಯವರ ತಂದೆಯವರು ಜೆಡಿಎಸ್ ಅಧಿಕಾರಕ್ಕೆ ಬರುತ್ತದೆ ಎನ್ನುವ ಭರವಸೆಯಲ್ಲಿ ನಮ್ಮ ಪರ ಕಾರ್ಯವನ್ನು ನಿರ್ವಹಿಸಿದ್ದರು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಇದರ ಶಾಕ್​​ನಿಂದಾಗಿ ಅವರ ತಂದೆಗೆ ಹೃದಯಾಘಾತ ಸಂಭವಿಸಿ ಮರಣ ಹೊಂದಿದ್ದಾರೆ. ಅವರು ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಆ ಕುಟುಂಬದ ಬಗ್ಗೆ ನನಗೆ ಅನುಕಂಪ ಇದೆ. ಕೃಷ್ಣಮೂರ್ತಿ ನಮ್ಮ ಪಕ್ಷದ ಕಾರ್ಯಕರ್ತರು.  ಸ್ವಂತ ದುಡಿಮೆಯಿಂದ ಕೃಷ್ಣಮೂರ್ತಿ ಬೆಳೆದಿದ್ದಾರೆ. ಹೀಗಾಗಿ ಕಾರ್ಯಕರ್ತರಿಗೆ ಟಿಕೆಟ್ ನೀಡಿದ್ದೇವೆ ಎಂದು ಹೇಳಿದರು.

Exit mobile version