ಆರ್ ಬಿ ಐ ವ್ಯಾಪ್ತಿಯಲ್ಲಿ ಎಲ್ಲ ಸಹಕಾರಿ ಬ್ಯಾಂಕುಗಳು

ಕೇಂದ್ರ ಸರ್ಕಾರದ ಮಹತ್ವದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆವರು ಶನಿವಾರ ಒಪ್ಪಿಗೆ ನೀಡಿ ಅಂಕಿತ ಹಾಕಿದ್ದಾರೆ.
ಇನ್ನು ಮುಂದೆ ದೇಶದ ಎಲ್ಲ ಸಹಕಾರಿ ಬ್ಯಾಂಕುಗಳು ವ್ಯಾಪ್ತಿಗೆ ಬರಲಿವೆ. ವಂಚನೆ ಪ್ರಕರಣದಗಳು ಹೆಚ್ಚಾಗುತ್ತಿದ್ದ ಹಿನ್ನೆಲೆ ಕೇಂದ್ರ ಎಲ್ಲ ಸಹಕಾರಿ ಬ್ಯಾಂಕುಗಳನ್ನು ರಿಸರ್ವ್ ಬ್ಯಾಂಕ್ ಅಡಿಯಲ್ಲಿ ತರುವ ಕುರಿತು ಈ ಹಿಂದೆ ಸುಗ್ರೀವಾಜ್ಞೆ ಹೊರಡಿಸಿ ರಾಷ್ಟ್ರಪತಿ ಅಂಕಿತಕ್ಕೆ ಕಳುಹಿಸಿತ್ತು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಈ ಸುಗ್ರೀವಾಜ್ಞೆಗೆ ಅಂಕಿತ ನೀಡಿದ್ದಾರೆ.
ಬ್ಯಾಂಕಿಂಗ್ ನಿಯಂತ್ರಣ ಮಸೂದೆ-2020 ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಮಂಡಿಸಲು ಸರ್ಕಾರ ಮುಂದಾಗಿತ್ತು. ಆದರೆ ಕರೋನಾ ಸೋಂಕಿನಿಂದಾಗಿ ಅಧಿವೇಶನ ಮುಂದುಡಲಾಗಿತ್ತು ಇದರಿಂದ ಮಸೂದೆ ಪಾಸ್ ಆಗಿರಲಿಲ್ಲ. ಆದರೆ ಇಂದು ಈ ಮಸೂದೆ ಪಾಸ್ ಆಗಿದೆ. ಸಹಕಾರಿ ಬ್ಯಾಂಕುಗಳಲ್ಲಿ ಠೇವಣಿ ಇರಿಸಿರುವ ಗ್ರಾಹಕರ ಹಿತ ಕಾಯಲು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿತ್ತು.

ಕಳೆದ ವರ್ಷ ಪಂಜಾಬ್ ಸಹಕಾರ ಬ್ಯಾಂಕ್‍ನಲ್ಲಿ ನಡೆದ ಅವ್ಯವಹಾರ ಬೆಳಕಿಗೆ ಬಂದ ನಂತರ ಗ್ರಾಹಕರ ಹಿತ ಕಾಪಾಡಿ ಎಂದು ಆಗ್ರಹ ಕೇಳಿ ಬಂದಿತ್ತು. ಕರ್ನಾಟಕದಲ್ಲೂ ಕೂಡ ಹಗರಣ ಕೇಳಿಬಂದಿತ್ತು. ಆದ್ದರಿಂದ ಈ ವರ್ಷದ ಬಜೆಟ್‍ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರ್‍ಬಿಐ ಅಡಿಯಲ್ಲಿ ಸಹಕಾರಿ ಬ್ಯಾಂಕ್‍ಗಳನ್ನು ತರಲಾಗುವುದು ಎಂದು ತಿಳಿಸಿದ್ದರು.

Exit mobile version