ಇಂದಿನಿಂದ ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವೆ 2ನೇ ಟೆಸ್ಟ್

(AP Photo)

ಮ್ಯಾಂಚೆಸ್ಟರ್‍: ಕ್ರಿಕೆಟ್‍ ಜಗತ್ತಿನಲ್ಲಿ ತಮ್ಮದೇ ಛಾಪು ಮೂಡಿಸಿದ್ದ ವೆಸ್ಟ್ ಇಂಡೀಸ್‍, ಆಂಗ್ಲರ ನಾಡಿನಲ್ಲಿ ಮೂರು ದಶಕಗಳ ಬಳಿಕ ಐತಿಹಾಸಿ ಟೆಸ್ಟ್ ಸರಣಿ ಗೆಲ್ಲುವ ತವಕದಲ್ಲಿದೆ.

ಕ್ರಿಕೆಟ್‍ ಆರಂಭವಾದ ದಿನಗಳಲ್ಲಿ ಅದ್ಭುತ ಪ್ರದರ್ಶನದ ಮೂಲಕ ಅಭಿಮಾನಿಗಳ ಮನಗೆದ್ದಿದ್ದ ಕೆರೆಬಿಯನ್ನರು ನಂತರದ ವರ್ಷಗಳಲ್ಲಿ ಕ್ರಿಕೆಟ್ ಅಂಗಳದಲ್ಲಿ ನಿರೀಕ್ಷಿತ ಯಶಸ್ಸು ಕಂಡಿಲ್ಲ. ಹಲವಾರು ಕಾರಣಗಳಿಂದ ಮೈದಾನದಲ್ಲಿ ತಮ್ಮ ಸರ್ವಶ್ರೇಷ್ಠ ಪ್ರದರ್ಶನ ನೀಡುವಲ್ಲಿ ಎಡವಿದ್ದ ವೆಸ್ಟ್ ಇಂಡೀಸ್‍, ಇದೀಗ ಐತಿಹಾಸಿ ಟೆಸ್ಟ್ ಸರಣಿ ಗೆಲ್ಲಲು ರಣತಂತ್ರ ರೂಪಿಸಿಕೊಂಡಿದೆ.

ನಾಯಕ ಜೇಸನ್‍ ಹೋಲ್ಡರ್‍ ಸಾರಥ್ಯದಲ್ಲಿ ಮುನ್ನಡೆಯುತ್ತಿರುವ ವೆಸ್ಟ್ ಇಂಡೀಸ್‍, ಪ್ರಸ್ತುತ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಗೆದ್ದು 1-0 ಮುನ್ನಡೆ ಸಾಧಿಸುವ ಮೂಲಕ ಹೊಸದೊಂದು ನಿರೀಕ್ಷೆ ಹುಟ್ಟಿಸಿದ್ದಾರೆ. ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದಿರುವ ವೆಸ್ಟ್ ಇಂಡೀಸ್ ಸಹಜವಾಗಿಯೇ ಆತ್ಮವಿಶ್ವಾಸದಿಂದ ಬೀಗುತ್ತಿದೆ.

ಉಭಯ ತಂಡಗಳ ನಡುವಿನ 2ನೇ ಪಂದ್ಯ ಇಂದಿನಿಂದ ಮ್ಯಾಂಚೆಸ್ಟರ್‍ನಲ್ಲಿ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡ ವಿಭಾಗದಲ್ಲಿ ಮಿಂಚಿದ್ದ ಕೆರೆಬಿಯನ್‍ ಆಟಗಾರರು, ಈ ಪಂದ್ಯದಲ್ಲೂ ಅದೇ ಪ್ರದರ್ಶನ ಮುಂದುವರಿಸುವ ವಿಶ್ವಾಸ ಹೊಂದಿದ್ದಾರೆ. ಮತ್ತೊಂದೆಡೆ ಮೊದಲ ಪಂದ್ಯದಲ್ಲಿ ಸೋಲನುಭವಿಸಿರುವ ಇಂಗ್ಲೆಂಡ್, 2ನೇ ಪಂದ್ಯದಲ್ಲಿ ಪುಟಿದೇಳುವ ವಿಶ್ವಾಸದಲ್ಲಿದೆ.

Exit mobile version