ಬೆಂಗಳೂರು, ಅ. 16: ಕೊರೊನಾ ಮಹಾಮಾರಿಯಿಂದಾಗಿ ತತ್ತರಿಸಿ ಹೋಗಿರುವ ಜನರು, ಉದ್ಯೋಗವಿಲ್ಲದೇ, ಆದಾಯವಿಲ್ಲದೇ ಬೇಸತ್ತು ಹೋಗಿದ್ದಾರೆ. ಇದೇ ಸಂದರ್ಭದಲ್ಲಿ ಗ್ರಾಹಕರಿಗೆ ಇದೀಗ ಈರುಳ್ಳಿ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ಕೆಜಿ ಈರುಳ್ಳಿ ಬೆಲೆ 75 ರೂ. ವರೆಗೆ ತಲುಪಿದೆ.
ಕಳೆದೊಂದು ವಾರದಿಂದ ರಾಜ್ಯದಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಹಿನ್ನೆಲೆಯಲ್ಲಿ ಈರುಳ್ಳಿ ಬೆಳೆಗೆ ಹಾನಿಯಾಗಿರುವ ಹಿನ್ನಲೆಯಲ್ಲಿ ಬೆಲೆ ಏರಿಕೆಯಾಗಿದ್ದು. ಮುಂದಿನ ದಿನಗಳಲ್ಲಿ ಮತ್ತಷ್ಟು ಈರುಳ್ಳಿ ಬೆಲೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹಾಪ್ ಕಾಮ್ಸ್ ನಲ್ಲಿ ಕೆಜಿಗೆ ಈರುಳ್ಳಿ ದರ 75 ರೂ. ಇದೆ.