ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಅಂಚೆ ಇಲಾಖೆಯಿಂದ ಗುಡ್ ನ್ಯೂಸ್

ನವದೆಹಲಿ, ನ. 23 : ಇದೀಗ ದೇಶದ ನಿರುದ್ಯೋಗಿಗಳಿಗೆ ಭಾರತೀಯ ಅಂಚೆ ಇಲಾಖೆ ಸಿಹಿಸುದ್ದಿ ನೀಡಿದ್ದು, ಭಾರತೀಯ ಅಂಚೆ ವಿಭಾಗ ಗ್ರಾಮೀಣ ಡಾಕ್ ಸೇವಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

ಭಾರತೀಯ ಅಂಚೆ ಇಲಾಖೆಯು ಒಟ್ಟು 2,582 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಕನಿಷ್ಟ 10 ನೇ ತರಗತಿ ಪಾಸಾದ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ appost in ಗೆ ಭೇಟಿ ನೀಡಬಹುದು.  ಆನ್ ಲೈನ್ ಅರ್ಜಿ ಸಲ್ಲಿಸಲು ನವೆಂಬರ್ 12 ರಿಂದ ಆರಂಭವಾಗಿ ಡಿಸೆಂಬರ್ 11ಕ್ಕೆ ಕೊನೆಯ ದಿನಾಂಕವಾಗಿದೆ ಎಂಬು ತಿಳಿಸಿದ್ದಾರೆ.

.

Exit mobile version