ಬೆಂಗಳೂರು, ನ. 10: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಮತೆಣಿಕೆ ಕಾರ್ಯವು ನಡೆಯುತ್ತಿದ್ದು, ಈಗಾಗಲೇ ಎರಡೂ ಕಡೆಯಲ್ಲಿಯೂ ಬಿಜೆಪಿ ಮುನ್ನಡೆಯನ್ನು ಸಾಧಿಸಿದೆ.
ಆರ್ ಆರ್ ನಗರದಲ್ಲಿ, ಮುನಿರತ್ನ ಅವರು 28,612 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್ 13,969 ಮತಗಳ ಅಂತರದಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಇನ್ನು ಜೆಡಿಎಸ್ ಅಭ್ಯರ್ಥಿ 829 ಮತಗಳನ್ನು ಪಡೆದುಕೊಂಡಿದ್ದಾರೆ. ಒಟ್ಟು 14643 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ ಮುನಿರತ್ನ.
ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ಸಿಎಂ ರಾಜೇಶ್ ಗೌಡ
11,770 ಮತಗಳನ್ನು ಪಡೆದುಕೊಂಡಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ 10, 251 ಮತಗಳು, ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮಾ 6614 ಮತಗಳನ್ನು ಪಡೆದುಕೊಂಡಿದ್ದಾರೆ.