ಬೆಂಗಳೂರು, ಅ13: ಶಿರಾ ಆರ್. ಆರ್ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಇಂದು ಘೋಷಣೆ ಮಾಡಲಾಗಿದೆ.
ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಡಾ. ರಾಜೇಶ್ ಗೌಡ ಹಾಗೂ ಆರ್.ಆರ್. ನಗರ ವಿಧಾನ ಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ಅವರಿಗೆ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದೆ. ಆರ್.ಆರ್. ನಗರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿ ತೀವ್ರ ಪೈಪೋಟಿ ನಡೆಸಿದ್ದ ತುಳಸಿ ಮುನಿರಾಜುಗೌಡ ಅವರಿಗೆ ನಿರಾಸೆಯಾಗಿದೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಳೆ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.