ಉಪಚುನಾವಣೆ: ನಾಮಪತ್ರ ಸಲ್ಲಿಕೆಗೆ ಇಂದು ಅಂತಿಮ ದಿನ

ಬೆಂಗಳೂರು, . 16: ಶಿರಾ ಮತ್ತು ರಾಜರಾಜೇಶ್ವ ರಿನಗರ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಇಂದು ತೆರೆ ಬಿದ್ದಿದ್ದು, ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಎರಡೂ ಕ್ಷೇತ್ರಗಳಲ್ಲಿ ಮೂರು ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಈಗಾಗಲೇ ನಾಮಪತ್ರ ಸಲ್ಲಿಸಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ಅ.9ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ನಾಮಪತ್ರ ವಾಪಸ್ ಪಡೆಯಲು ಅ.19 ಅಂತಿಮ ದಿನವಾಗಿದೆ.

ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಟಿ.ಬಿ.ಜಯಚಂದ್ರ, ಬಿಜೆಪಿ ಅಭ್ಯರ್ಥಿಯಾಗಿ ಸಿ.ಎಂ.ರಾಜೇಶ್‍ಗೌಡ, ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ದಿ.ಬಿ.ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರು ನಾಮಪತ್ರ ಸಲ್ಲಿಸಿದ್ದಾರೆ. ಅಲ್ಲದೆ ಮೂರು ಮಂದಿ ಪಕ್ಷೇತರರು ನಿನ್ನೆಯವರೆಗೆ ನಾಮಪತ್ರ ಸಲ್ಲಿಸಿದ್ದಾರೆ.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಚ್. ಕುಸುಮಾ, ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ವಿ.ಕೃಷ್ಣಮೂರ್ತಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಅಲ್ಲದೆ, ಇತರೆ 9 ಅಭ್ಯರ್ಥಿಗಳು ಕೂಡ ಈ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ನವೆಂಬರ್ 3ರಂದು ಮತದಾನ ನಡೆಯಲಿದ್ದು, ನವೆಂಬರ್ 10ರಂದು ಮತ ಎಣಿಕೆ ನಡೆದು ಅಂದೇ ಫಲಿತಾಂಶ ಹೊರ ಬೀಳಲಿದೆ.

Exit mobile version