ಎನ್‌ಟಿಸ್ಇ & ಎನ್ಎಂಎಂಎಸ್ ಪರೀಕ್ಷೆಗೆ ಅರ್ಜಿ ಆಹ್ವಾನ

ಬೆಂಗಳೂರು, ನ. 10: 2020-21ನೇ ಸಾಲಿನ ಎನ್‍ಟಿಎಸ್‍ಇ & ಎನ್‍ಎಂಎಂಎಸ್ ಪರೀಕ್ಷೆಗಳನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಕೆ.ಎಸ್.ಕ್ಯು.ಎ.ಎ.ಸಿ. ವತಿಯಿಂದ ಜನವರಿ 24 ರಿಂದ ನಡೆಸಲಾಗುತ್ತಿದ್ದು, ಎನ್‍ಟಿಎಸ್‍ಇ ಪರೀಕ್ಷೆಗೆ 10ನೇ ತರಗತಿಯಲ್ಲಿ ಪ್ರಸಕ್ತ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಎನ್‍ಎಂಎಂಎಸ್ ಪರೀಕ್ಷೆಗೆ 8ನೇ ತರಗತಿಯಲ್ಲಿ ಪ್ರಸಕ್ತ ವರ್ಷದಲ್ಲಿ ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿಗಳನ್ನು ಆನ್‍ಲೈನ್ ಮೂಲಕ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್‍ಸೈಟ್‍ನಲ್ಲಿ ನವೆಂಬರ್ 30 ರೊಳಗೆ ಸಲ್ಲಿಸಬೇಕು.  ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಮಂಡಳಿಯ ವೆಬ್‍ಸೈಟ್‍ನಲ್ಲಿ ಪಡೆಯಬಹುದಾಗಿದೆ.

ಇಲಾಖೆಯ ತಾಲ್ಲೂಕು ಮತ್ತು ಜಿಲ್ಲಾ ಹಂತದ ಅಧಿಕಾರಿಗಳು ಶಾಲಾ ಮುಖ್ಯ ಶಿಕ್ಷಕರ ಸಭೆ ಕರೆದು ಸದರಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವ ಸಂಬಂಧ ಸೂಕ್ತ ಮಾರ್ಗದಶನ ನೀಡುವಂತೆ  ಕೆ.ಎಸ್.ಕ್ಯು.ಎ.ಸಿ. ಯ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version