ಎಲ್ ಕೆ ಅಡ್ವಾಣಿ ನಿರ್ದೋಷಿ

ಲಕ್ನೋ:   ಬಾಬ್ರಿ ಮಸೀದಿ ದ್ವಂಸದ  ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದೆ. ಬಾಬ್ರಿ ಮಸೀದಿ ಧ್ವಂಸ ಕ್ಕೆ ಸಂಬಂಧಿಸಿದಂತೆ ಎಲ್ ಕೆ ಅಡ್ವಾಣಿ, ಡಾ. ಮುರಳಿ ಮನೋಹರ್ ಜೋಶಿ ಸೇರಿದಂತೆ ಇತರ ಎಲ್ಲಾಆರೋಪಿಗಳು ನಿರ್ದೋಷಿಗಳು ಎಂದು ಮಹತ್ವದ ತೀರ್ಪನ್ನು ವಿಶೇಷ ನ್ಯಾಯಾಲಯ  ನೀಡಿದೆ.

ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಒಂದು ಆಕಸ್ಮಿಕ ಘಟನೆ, ಮಸೀದಿ ದ್ವಂಸ ಪೂರ್ವ ನಿಯೋಜಿತ ಕೃತ್ಯ ಅಲ್ಲ. ಆರೋಪಿಗಳ ವಿರುದ್ಧ ಪೂರ್ವ ಪ್ರಬಲ ಸಾಕ್ಷಿಗಳಿಲ್ಲ ಎಂದು ನ್ಯಾಯಮೂರ್ತಿ ಎಸ್ ಕೆ ಯಾದವ್ ತೀರ್ಪು ಪ್ರಕಟಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ಇತ್ತು. ಮೊಘಲ್ ಕಾಲದಲ್ಲಿ ರಾಮ ಮಂದಿರವನ್ನು ಕೆಡವಿ ಬಾಬ್ರಿ ಮಸೀದಿಯನ್ನು ಕಟ್ಟಲಾಗಿದೆ ಎಂದು ಆರೋಪಿಸಿ  1984 ರಲ್ಲಿ ವಿಶ್ವ ಹಿಂದೂ ಪರಿಷತ್ ಆಂದೋಲನ ಶುರು ಮಾಡಿ ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲು ಹತ್ತಿತ್ತು.

ಈ ಪ್ರಕರಣ ನ್ಯಾಯಾಲಯದಲ್ಲಿರುವಾಗಲೇ 1992ರ ಡಿಸೆಂಬರ್ 6ರಂದು ಕರಸೇವಕರೆಂಬ ಹಿಂದೂ ಕಾರ್ಯಕರ್ತರು ಬಾಬ್ರಿ ಮಸೀದಿಯನ್ನು ಧ್ವಂಸ ಮಾಡಿದ್ದರು.ಬಾಬ್ರಿಮಸೀದಿ ದ್ವಂಸ ಪ್ರಕರಣ 28 ವರ್ಷಗಳ ಸುಧೀರ್ಘ ಕಾನೂನು ಹೋರಾಟಕ್ಕೆ ತಾತ್ವಿಕ ಅಂತ್ಯ ಸಿಕ್ಕಿದೆ.

Exit mobile version