ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆ ತರಬೇತಿ

ಬೆಂಗಳೂರು, ನ. 3: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗ ಮತ್ತು ರಾಜ್ಯ ಲೋಕಸೇವಾ ಆಯೋಗ ನಡೆಸಲಿರುವ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 60 ದಿನಗಳ ಆನ್‍ಲೈನ್ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

ಆಸಕ್ತರು ದಿನಾಂಕ: 13.11.2020 ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದೆಂದು  ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಲಿಂಗರಾಜ ಗಾಂಧಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಹೆಚ್ಚಿನ ವಿವರಗಳಿಗೆ 0821-2515944 ಈ ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದಾಗಿದೆ.

Exit mobile version