ಒಬಾಮಾ ಪುಸ್ತಕದ ವಿರುದ್ಧ ಸಿವಿಲ್ ಮೊಕದ್ದಮೆ ದಾಖಲು

ಉತ್ತರ ಪ್ರದೇಶ, ನ. 18: ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರ ‘ದಿ ಪ್ರಾಮಿಸ್ಡ್ ಲ್ಯಾಂಡ್’ ಪುಸ್ತಕದ ವಿರುದ್ಧ ಉತ್ತರ ಪ್ರದೇಶದ ಪ್ರತಾಪ್ಘರ್ ಎಂಬಲಿನ ವಕೀಲರೊಬ್ಬರು ಸಿವಿಲ್ ಮೊಕದ್ದಮೆ ಹೂಡಿದ್ದಾರೆ.

ಇತ್ತೀಚೆಗೆ ಲೋಕಾರ್ಪಣೆಗೊಂಡ ದಿ ಪ್ರಾಮಿಸ್ಡ್ ಲ್ಯಾಂಡ್
ಪುಸ್ತಕದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಉಲ್ಲೇಖಿಸಿ, ಅವರನ್ನು ಅವಮಾನಿಸುವ ಮೂಲಕ ಅವರ ಬೆಂಬಲಿಗರ ಭಾವನೆಗಳಿಗೆ ನೋವುಂಟು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಒಬಾಮಾ ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಲಾಗಿದೆ. ಈ ಬಗ್ಗೆ ಅಖಿಲ ಭಾರತ ಗ್ರಾಮೀಣ ವಕೀಲರ ಸಂಘದ ರಾಷ್ಟ್ರೀಯ ಅಧ್ಯಕ್ಷ ಜ್ಞಾನಪ್ರಕಾಶ್ ಶುಕ್ಲಾ , ಲಾಲ್ಗಂಜ್ ಸಿವಿಲ್ ನ್ಯಾಯಾಲಯದಲ್ಲಿ ಸಿವಿಲ್ ಮೊಕದ್ದಮೆ ಹೂಡಲಾಗಿದ್ದು, ಈ ಅರ್ಜಿಯ ವಿಚಾರಣೆ ಡಿ.6ರಂದು ನಡೆಯಲಿದೆ.

ಕಾಂಗ್ರೆಸ್‌ನ ಈ ಇಬ್ಬರು ಪ್ರಮುಖ ನಾಯಕರು ಕೋಟ್ಯಾಂತರ ಬೆಂಬಲಿಗರನ್ನು ಹೊಂದಿದ್ದು, ಒಬಾಮಾ ಅವರ ಪುಸ್ತಕದಲ್ಲಿ ಈ ರೀತಿ ಬರೆದಿರುವುದು ಬೆಂಗಲಿಗರಿಗೆ ನೋವುಂಟು ಮಾಡಿದೆ. ಹೀಗಾಗಿ ಕಾಂಗ್ರೆಸ್ ಬೆಂಬಲಿಗರು ಒಬಾಮಾ ಅವರ ಪುಸ್ತಕದ ವಿರುದ್ಧ ಪ್ರತಿಭಟನೆ ನಡೆಸುವ ಸಾಧ್ಯತೆ ಹೆಚ್ಚಾಗಿರುವುದರಿಂದ ಒಬಾಮಾ ಅವರ ವಿರುದ್ಧ ಪ್ರಕರಣ ದಾಖಲಿಸುತ್ತಿರುವುದಾಗಿ ವಕೀಲ ಜ್ಞಾನ ಪ್ರಕಾಶ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

Exit mobile version