ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

ಬೆಂಗಳೂರು, ನ. 7: ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ವಿವಿಧ ಕ್ಷೇತ್ರಗಳ ಸಾಧಕರಿಗೆ ಶನಿವಾರ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಇತರೆ ಗಣ್ಯರು 2020ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರಧಾನ ಮಾಡಿದರು. 65ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ 65 ಮಂದಿ ಸಾಧಕರಿಗೆ ಸರ್ಕಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿತ್ತು.

ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ, ಸಂಸದ ತೇಜಸ್ವಿ ಸೂರ್ಯ, ಶಾಸಕ ಉದಯ್ ಬಿ.ಗಡುರಾಚಾರ್ ಸೇರಿದಂತೆ ಇನ್ನಿತರರು ಹಾಜರಿದ್ದರು.

Exit mobile version