ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು, ಅ.15ನೈಋುತ್ಯ ಮುಂಗಾರು ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚುರುಕಾಗಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ,ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಈಗಾಗಲೇ ಬಾಗಲಕೋಟೆ, ವಿಜಯಪುರ, ಬೆಳಗಾವಿ, ಗದಗ ಹಾಗೂ ನೆರೆಯ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗಿದ್ದು ಹಲವು ಗ್ರಾಮಗಳು ಜಲಾವೃತಗೊಂಡಿವೆ.

ಕರಾವಳಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್‌ ಧಾರವಾಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉಳಿದಂತೆ ಇತರೆ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕ್ಷೀಣಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 ನೆರೆಯ ತೆಲಂಗಾಣದಲ್ಲೂ ಕುಂಭದ್ರೋಣ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತ ಉಂಟಾದ ಹಿನ್ನೆಲೆಯದಲ್ಲಿ ದಕ್ಷಿಣ ಬಾರತದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ. ಮುಂದಿನ 24 ಗಂಟೆಗಳಲ್ಲೂ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Exit mobile version