ನವದೆಹಲಿ, ಅ.20: ಅನ್ ಲಾಕ್ 5.0 ಜಾರಿಯ ನಂತರ, ಪ್ರಧಾನಿ ನರೇಂದ್ರ ಮೋದಿಯವರು ಇದೇ ಮೊದಲ ಬಾರಿಗೆ ದೇಶದ ಜನತೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದು, ಇಂದು ಸಂಜೆ 6 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ಧಾರೆ ಎಂದು ತಿಳಿದು ಬಂದಿದೆ. ಆದರೆ ಈ ಭಾಷಣವು ಜನತೆಗೆ ತೀವ್ರ ಕುತೂಹಲ ಕೆರಳಿಸಿರುವುದಂತೂ ನಿಜ.
ಇಂದು ಸಂಜೆ 6 ಗಂಟೆಗೆ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದೇನೆ ಎಂಬುದಾಗಿ ಸ್ವತಃ ಪ್ರಧಾನಿ ಮೋದಿಯವರು ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ. ಪ್ರಧಾನಿಯವರ ಈ ಟ್ವೀಟ್ ತೀವ್ರ ಕುತೂಹಲ ಕೆರಳಿಸಿದ್ದು, ಪಿಎಂ ಇಂದು ಸಂಜೆ 6 ಗಂಟೆಗೆ ದೇಶದ ಜನತೆಯನ್ನು ಉದ್ದೇಶಿಸಿ ಏನ್ ಭಾಷಣ ಮಾಡಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ.