ಕೃಷಿ ಮಸೂದೆ ಸಮಸ್ಯೆ ಬಗೆಹರಿಸಲು ಸಮಿತಿ ರಚನೆ: ಸುಪ್ರೀಂ ಕೋರ್ಟ್

ನವದೆಹಲಿ, ಜ. 12: ರೈತರು ನೀಡಿರುವ ಕೃಷಿ ಮಸೂದೆ  ಕಾಯಿದೆ ಕುರಿತ ಅರ್ಜಿಯನ್ನು  ಪರಿಶೀಲಿಸಿದ ಸುಪ್ರೀಂ ಕೋರ್ಟ್ , ಈ  ಮಸೂದೆಯ ಸಮಸ್ಯೆಗಳನ್ನು ಬಗೆಹರಿಸಲು ನಾವು ಸಮಿತಿಯನ್ನು ರಚನೆ ಮಾಡುತ್ತಿದ್ದೇವೆ ಎಂದು ರೈತರಿಗೆ ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ.

ಕೃಷಿ ಮಸೂದೆ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಯಾವುದೇ ಶಕ್ತಿಗೂ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಈಗಿರುವ ಸಮಸ್ಯೆಯನ್ನು ನಾವು ಇತ್ಯರ್ಥಪಡಿಸಲೇಬೇಕಾಗಿದೆ. ಅದ್ದರಿಂದ ಸಮಿತಿಯೊಂದನ್ನು ರಚನೆ ಮಾಡುತ್ತಿದ್ದೇವೆ. ಸಮಿತಿಯಲ್ಲಿ ಕಾಯ್ದೆಯ ಸಮಸ್ಯೆಗಳ ಕುರಿತು ಚರ್ಚೆ ನಡೆಸುತ್ತೇವೆ. ರೈತರು ಸಹಕಾರ ನೀಡಬೇಕೆಂದು ಮುಖ್ಯ ನ್ಯಾಯಾಮೂರ್ತಿಗಳು ಹೇಳಿದ್ದಾರೆ.

ವಿಚಾರಣೆ ವೇಳೆ ಕಾಯ್ದೆ ಕುರಿತು ಈಗಾಗಲೇ ಸಾಕಷ್ಟು ಸಂಧಾನ ಸಭೆಗಳು ನಡೆದಿದೆ. ಹಲವು ನಾಯಕರು ನಮ್ಮೊಂದಿಗೆ ಚರ್ಚೆ ನಡೆಸಿದ್ದಾರೆ. ಆದರೆ, ಪ್ರಧಾನಿ ಮೋದಿಯವರು ಮಾತ್ರ ಚರ್ಚೆ ನಡೆಸಲಿಲ್ಲ ಎಂದು ರೈತರು ಹೇಳುತ್ತಿದ್ದಾರೆಂದು ರೈತರ ಪರ ವಕೀಲ ಎಮ್‌ಎಲ್ ಶರ್ಮಾ ಅವರು ಹೇಳಿದರು.

ಈ ವೇಳೆ ಮಾತನಾಡಿರುವ ಮುಖ್ಯ ನ್ಯಾಯಮೂರ್ತಿಗಳು, ಪ್ರಧಾನಿಯನ್ನು ಪ್ರತಿಭಟನಾ ಸ್ಥಳಕ್ಕೆ ತೆರಳಿ ಎಂದು ಹೇಳಲು ನಮಗೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Exit mobile version