ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರಿಗೆ ಕೊರೊನಾ ಪಾಸಿಟಿವ್

ಹೊಸದಿಲ್ಲಿ, ನ. 19: ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಡಿ.ವಿ. ಸದಾನಂದ ಗೌಡ, ಕೊರೊನಾ ವೈರಸ್‌ನ ಪ್ರಾರಂಭಿಕ ಲಕ್ಷಣ ಹಿನ್ನೆಲೆ ಕೋವಿಡ್‌ ಟೆಸ್ಟ್‌ ಮಾಟಿಸಬೇಕಾಯಿತು. ಆಗ ವರದಿ ಪಾಸಿಟಿವ್‌ ಬಂದಿದೆ. ಸದ್ಯ ಸ್ವಯಂ ಕ್ವಾರಂಟೈನ್‌ನಲ್ಲಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಸುರಕ್ಷಿತವಾಗಿರಿ ಹಾಗೂ ನಿಯಮದಂತೆ ಕೊರೊನಾ ಪರೀಕ್ಷೆ ಮಾಡಿಸಿ ಎಂದು ತಿಳಿಸಿದ್ದಾರೆ.

ಸಚಿವ ಡಿ.ವಿ. ಸದಾನಂದ ಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ರಾಜಕೀಯ ನಾಯಕರು, ಸದಾನಂದ ಗೌಡರ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

Exit mobile version