ಕೊರೊನಾದ ಜತೆಗೆ ಇಲಿ ಜ್ವರದ ಕಾಟ

ಕೊಪ್ಪಳ, ನ. 3: ದೇಶಾದ್ಯಂತ ಕೊರೋನಾ ಸೋಂಕಿಗೆ ಜನ ಈಗಾಗಲೇ ತತ್ತರಿಸಿಹೋಗಿದ್ದಾರೆ. ಅದರ ಮದ್ಯೆ ಇದೀಗ ಮತ್ತೊಂದು ಕಾಯಿಲೆ ಕಂಡು ಬಂದಿದೆ. ಈವರೆಗು ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು ಆರು ಇಲಿ ಜ್ವರ ಪ್ರಕರಣಗಳು ವರದಿಯಾಗಿವೆ.

ಇದರಲ್ಲಿ ಕೊಪ್ಪಳ ತಾಲೂಕಿನಲ್ಲಿ ಐದು ಹೊಸಳ್ಳಿಯಲ್ಲಿ ಎರಡು, ಹೊಸಲಿಂಗಾಪುರ, ಕೆರೆಹಳ್ಳಿ ಕುಷ್ಟಗಿ, ನರೇಗಲ್ ಗ್ರಾಮಗಳಲ್ಲಿ ತಲಾ ಒಂದು ಹಾಗೂ ಕುಷ್ಟಗಿ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ಒಂದು ಇಲಿಜ್ವರ ಪ್ರಕರಣ ಪತ್ತೆಯಾಗಿವೆ. ಕಾಮಾಲೆ ಕಾಯಿಲೆಗಳ ಗುಣಲಕ್ಷಣಗಳನ್ನು ಹೊಂದಿರುವ ಈ ಕಾಯಿಲೆಯನ್ನು ನಿರ್ಲಕ್ಷಿಸಬಾರದು ,ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು.

ಜಿಲ್ಲಾ ಆರೋಗ್ಯ‌ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ  ಎಚ್ಚರಿಕೆ ನೀಡಿದೆ. ಜೊತೆಗೆ ವಹಿಸಬೇಕಾದ ಮುನ್ನೆಚ್ಚರಿಕೆ, ಇಲಿ ಜ್ವರದ ಗುಣಲಕ್ಷಣಗಳನ್ನು ತಿಳಿಸಿದೆ.

ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜ್ ಅವರು, ಇಲಿಜ್ವರ ಪತ್ತೆಯಾಗಿರುವುದು ನಿಜ ಆದರೆ . ಲೆಫ್ಟೋಸ್ವೈರೋಸಿಸ್ ಎಂಬುದು ಇದರ ವೈಜ್ಞಾನಿಕ ಹೆಸರು. ಇಲಿಜ್ವರ ಎಂದಾಕ್ಷಣ ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅಗತ್ಯ‌ ಇಲ್ಲ ಹಾಗೂ ನಿರ್ಲಕ್ಷ  ಮಾಡುವಂತಿಲ್ಲ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡಿದರೆ ಗುಣವಾಗುತ್ತದೆ ಎಂದು ಹೇಳಿದ್ದಾರೆ.

Exit mobile version