ಬೆಂಗಳೂರು: ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚು ವ್ಯಾಪಕವಾಗಿ ಹರಡುತ್ತಿದೆ.ಶಾಲಾ ಮಕ್ಕಳಿಗೂ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು .ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಘೋಷಿಸಿದೆ. ಕಳೆದ ಕೆಲವು ದಿನಗಳಿಂದ ನಗರದ ಪೊಲೀಸ್ ಸಿಬ್ಬಂದಿಗಳಲ್ಲಿ ಹೆಚ್ಚಾಗಿ ಕೊರೋನಾ ಪ್ರಕರಣಗಳು ದಾಖಲಾಗುತ್ತಿವೆ . ಈವರೆಗೆ ಒಟ್ಟು 618 ಜನ ಪೊಲೀಸ್ ಸಿಬ್ಬಂದಿಗಳನ್ನು ಸೋಂಕು ಕಾಣಿಸಿಕೊಂಡಿತ್ತು .ಆದರೆ ಇಂದು ಒಂದೇ ದಿನ 114 ಮಂದಿ ಪೊಲೀಸರಲ್ಲಿ ಸೋಂಕು ಕಾಣಿಸಿಕೊಂಡಿದೆ . 618 ಜನರಲ್ಲಿ 36 ಸಿಬ್ಬಂದಿ ಗುಣಮುಖರಾಗಿದ್ದಾರೆ. ವಾಹನ ತಪಾಸಣೆ ಮಾಸ್ಕ್ ಹಾಕುವ ಸಿಬ್ಬಂದಿಗಳಿಗೆ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ ಎಂದು ವರದಿಯಾಗಿದೆ