ಕೋಟಿಗೊಬ್ಬ-3 ಚಿತ್ರದ ಪೋಸ್ಟರ್ ರಿಲೀಸ್

ಕಿಚ್ಚ ಸುದೀಪ್‍ ಅಭಿಮಾನಿಗಳು ಶುಕ್ರವಾರ ಫುಲ್‍ ಖುಷ್‍ ಆಗಿದ್ದಾರೆ. ಇದಕ್ಕೆ ಕಾರಣ, ಅಭಿಯನ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಕೋಟಿಗೊಬ್ಬ-3 ಚಿತ್ರದ ಪೋಸ್ಟರ್‍ ಬಿಡುಗಡೆಯಾಗಿದೆ.

ಚಿತ್ರದ ನಿರ್ಮಾಪಕ ಸೂರಪ್ಪ ಬಾಬು ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕೋಟಿಗೊಬ್ಬ-3 ಚಿತ್ರದ ಪೋಸ್ಟರ್‍ ಅನ್ನು ಚಿತ್ರ ತಂಡ ಬಿಡುಗಡೆ ಮಾಡಿದೆ. ಹೀಗಾಗಿ ಕಿಚ್ಚನ ಅಭಿಮಾನಿಗಳ ಸಂತಸವನ್ನು ಇಮ್ಮಡಿಗೊಳಿಸುವ ಜೊತೆಗೆ, ಚಿತ್ರದ ನಿರೀಕ್ಷೆಯನ್ನು ಹೆಚ್ಚಿಸಿದೆ.


ಶಿವ ಕಾರ್ತಿಕ್ ನಿರ್ದೇಶನದ ಕೋಟಿಗೊಬ್ಬ-3 ಚಿತ್ರದಲ್ಲಿ ಕಿಚ್ಚ ಸುದೀಪ್‍ ಅವರಿಗೆ ನಾಯಕಿಯಾಗಿ ಪ್ರೇಮಂ ಖ್ಯಾತಿಯ ಮಡೋನಾ ಸೆಬಾಸ್ಟಿಯನ್‍ ಕಾಣಿಸಿಕೊಂಡಿದ್ದಾರೆ. ಇದಲ್ಲದೇ ಚಿತ್ರದಲ್ಲಿ ಬಾಲಿವುಡ್ ನಟ ಅಫ್ತಭ್ ಶಿವದಾಸಾನಿ, ನವಾಜ್‍ ಶಾ, ರವಿಶಂಕರ್, ಶ್ರದ್ಧಾ ದಾಸ್ ಸೇರಿದಂತೆ ಬಹುದೊಡ್ಡ ತಾರಾ ಬಳಗವೇ ಇದೆ. ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಮಾರ್ಚ್‍ ಅಥವಾ ಏಪ್ರಿಲ್‍ನಲ್ಲಿ ಬಿಡುಗಡೆ ಆಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಚಿತ್ರ ಬಿಡುಗಡೆ ದಿನವನ್ನು ಮುಂದೂಡಲಾಗಿದೆ.

Exit mobile version