ಖಾಸಗಿ ಆಸ್ಪತ್ರೆಗಳಲ್ಲೂ ಕೊರೋನಾ ರೋಗಿಗಳಿಗೆ ಚಿಕಿತ್ಸೆ ಅಗತ್ಯ

ಕೊವೀಡ್ -೧೯  ರಾಜ್ಯದಲ್ಲಿ ಕೊರೋನಾ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇತ್ತ ಸರಕಾರಿ ಆಸ್ಪತ್ರೆಗಳಲ್ಲಿ   ಸೋಂಕಿತರು ಹೆಚ್ಚು ಹೆಚ್ಚು  ದಾಖಲಾಗುತ್ತಿದ್ದಾರೆ. ಈ ಹಿನ್ನಲೆ ಇನ್ಮುಂದೆ ಖಾಸಗಿ ಆಸ್ಪತ್ರೆಗಳಲ್ಲೂ ಕೊರೋನಾ  ರೋಗಿಗಳಿಗೆ ಚಿಕಿತ್ಸೆ ನೀಡಬೇಕೆಂದು  ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿತ್ತು.

ಕರ್ನಾಟಕ ಖಾಸಗಿ  ಸಂಸ್ಥೆ ಕಾಯ್ಧೆಯ ಪ್ರಕಾರ  ನಿಯಮವನ್ನು ಪಾಲಿಸಲೇಬೇಕು ಎಂದು ಈಗಾಗಲೇ ಆದೇಶದಲ್ಲಿ ತಿಳಿಸಿದ್ರೂ  ಕೆಲ ಖಾಸಗಿ ಆಸ್ಪತ್ರೆಗಳು ಇದಕ್ಕೆ ಹಿಂದೇಟು ಹಾಕ್ತಾ ಇದೆ . ಇದು ಸರ್ಕಾರದ ಗಮನಕ್ಕೆ  ಬಂದಿದ್ದು ಒಂದು ವೇಳೆ ಖಾಸಗಿ ಆಸ್ಪತ್ರೆಗಳು ಕಾನೂನನ್ನು  ಉಲ್ಲಂಘಿಸಿದ್ರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ತಿಳಿಸಿದ್ದಾರೆ .ಜೊತೆಗೆ ಎಲ್ಲಾ ರಾಜ್ಯ ಹಾಗೂ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಇದಲ್ಲದೇ ಖಾಸಗಿ ಆಸ್ಪತ್ರೆಗಳು ಕೊರೊನಾ ಸೋಂಕಿತರನ್ನು ದಾಖಲಿಸಲು ಅಥವಾ ಚಿಕಿತ್ಸೆ ನೀಡಲು ನಿರಾಕರಿಸಬಾರದು ಅಂತ ಹೇಳಿದೆ.

Exit mobile version