ಖಾಸಗಿ ಲ್ಯಾಬ್‌ಗಳ ವಿರುದ್ಧ ಕಠಿಣ ಕ್ರಮ: ಡಾ. ಸುಧಾಕರ್

ಬೆಂಗಳೂರು: ಕೋವಿಡ್-19 ಪರೀಕ್ಷೆಗೆ ಖಾಸಗಿ ಪ್ರಯೋಗಾಲಯಗಳಲ್ಲಿ ಭಾರೀ ಹಣವನ್ನು ವಸೂಲಿ ಮಾಡಲಾಗುತ್ತಿದೆ ಎನ್ನುವ ಆರೋಪಗಳ ಬೆನ್ನಲ್ಲೆ  ಮಾತನಾಡಿರುವ ವೈದ್ಯಕೀಯ ಸಚಿವ ಡಾ. ಸುಧಾಕರ್‌ ಖಾಸಗಿ ಲ್ಯಾಬ್‌ಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಸಚಿವರು, ಖಾಸಗಿ ಪ್ರಯೋಗಾಲಯಗಳಲ್ಲಿ ಕೋವಿಡ್-19 ಪರೀಕ್ಷೆಗೆ ನಿಗದಿಪಡಿಸಲಾಗಿದ್ದ ದರಗಳನ್ನು ತಾಂತ್ರಿಕ ಸಲಹಾ ಸಮಿತಿ ಮರುಪರಿಶೀಲಿಸಿದ್ದು, ಪರಿಷ್ಕೃತ ದರಪಟ್ಟಿಯನ್ನು ನಿಗದಿಪಡಿಸಿ, ಆದೇಶ ಹೊರಡಿಸಲಾಗಿದೆ ಎಂದರು.

ಸರಕಾರದ ಪ್ರಯೋಗಾಲಯಗಳು ಮಾತ್ರವಲ್ಲದೆ ಐಸಿಎಂಆರ್ ಅನುಮೋದಿತ ಖಾಸಗಿ ಪ್ರಯೋಗಾಲಯಗಳಲ್ಲಿ ಕೋವಿಡ್ 19 ಪರೀಕ್ಷೆಗೆ ಅನುಮತಿ ನೀಡಲಾಗಿತ್ತು. ಕೊರೊನಾ ಸೋಂಕು ಹೆಚ್ಚಾಗುತ್ತಿದ್ದ ಹಿನ್ನೆಲೆ ಅನುಮತಿ ನೀಡಲಾಗಿತ್ತು. ಸರ್ಕಾರ ನಿಗದಿ ಮಾಡಿರುವ ಗರಿಷ್ಠ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುವ ಲ್ಯಾಬ್ಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Exit mobile version