ಗಣನೀಯವಾಗಿ ಇಳಿಕೆ ಕಂಡ ಕೊರೊನಾ:ಗುಣಮುಖರಾಗುತ್ತಿರುವವರ ಸಂಖ್ಯೆಯೂ ಏರಿಕೆ

ನವದೆಹಲಿ: ದೇಶಾದ್ಯಂತ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದ ಕೊರೊನಾ ಮಹಾಮಾರಿ ಅಟ್ಟಹಾಸ ಕ್ರಮೇಣ ಕಡಿಯಾಗುತ್ತಿದ್ದಂತಿದೆ. ಕಳೆದ ಎರಡು ಮೂರು ದಿನಗಳಿಂದ ಸೋಂಕಿತರ ಪತ್ತೆ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದ್ದು, ದೇಶವಾಸಿಗಳು ನಿಟ್ಟುಸಿರು ಬಿಡುವಂತಾಗಿದೆ. ಕಳೆದ 24 ಗಂಟೆಯಲ್ಲಿ 61,267 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 66,85,083ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 884 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,03,569ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 9,19,023 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 56,62,491 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ಒಂದೇ ದಿನ 10,89,403 ಜನರಿಗೆ ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ಈ ವರೆಗೆ ದೇಶದಲ್ಲಿ 8,10,71,797 ಜನರಿಗೆ ಕೊವಿಡ್ ಪರೀಕ್ಷೆಗೆ ಒಳಪಡಿಸಲಾಗಿ ಎಂದು ಐಸಿಎಂ ಆರ್ ಮಾಹಿತಿ ನೀಡಿದೆ.

Exit mobile version