ಚಾಲಕ ಮತ್ತು ಸಿಬ್ಬಂದಿಗೆ ಕೊರೊನಾ ಹಿನ್ನಲೆ ಹೋಮ್ ಕ್ವಾರಂಟೈನ್‌ನಲ್ಲಿ ಬಾಲಿವುಡ್‌ ನಟ

ಮುಂಬೈ, ನ. 19: ತಮ್ಮ ಕಾರು ಚಾಲಕ ಹಾಗೂ ಇತರೆ ಇಬ್ಬರು ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್, ಸ್ವಯಂ ಪ್ರೇರಿತವಾಗಿ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಕೊರೊನಾ ಸೋಂಕಿಗೆ ತುತ್ತಾಗಿರುವ ಸಲ್ಮಾನ್ ಖಾನ್ ಅವರ ಚಾಲಕ ಹಾಗೂ ಇತರೆ ಸಿಬ್ಬಂದಿ, ಮುಂಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಮುಂಜಾಗ್ರತಾ ಕ್ರಮವಾಗಿ ಸಲ್ಮಾನ್‌ ಖಾನ್‌ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಅವರ ಕುಟುಂಬ ಸದಸ್ಯರೂ ಕೂಡಾ ಕ್ವಾರಂಟೈನ್‌ಗೆ ಒಳಗಾಗಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

Exit mobile version