ಜಂಬೂಸವಾರಿ 30-40 ನಿಮಿಷಗಳಿಗೆ ಸೀಮಿತ

ಮೈಸೂರು, ಅ. 24: ಸರಳ ದಸರಾ ಆಚರಣೆ ಹಿನ್ನೆಲೆಯಲ್ಲಿ ಈ ಬಾರಿ ಜಂಬೂಸವಾರಿಯ ಮೆರವಣಿಯನ್ನು 30 ರಿಂದ 40 ನಿಮಿಷಗಳಿಗೆ ಸೀಮಿತಗೊಳಿಸಲಾಗಿದೆ ಎಂದು ಪೊಲೀಸ್‌ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದರು.

ಅರಮನೆ ಆವರಣದಲ್ಲಿ ಶನಿವಾರ ದಸರಾ ಅಂತಿಮ ಸಿದ್ಧತೆ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ಸೋಮವಾರ ಬಲರಾಮ ಗೇಟ್​ನ‌ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ನಂತರ ಮಧ್ಯಾಹ್ನ ಮೆರವಣಿಗೆ ನಡೆಯಲಿದೆ. ಆಹ್ವಾನಿತರಿಗೆ ಮಾತ್ರ ಅರಮನೆ ಒಳಗಡೆ ಪ್ರವೇಶವಿದ್ದು, ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ಹೇಳಿದರು.

30 ರಿಂದ 40 ನಿಮಿಷಕ್ಕೆ ಜಂಬೂಸವಾರಿ ಅವಧಿ ಸೀಮಿತಗೊಳಿಸಲಾಗಿದೆ. ಜಂಬೂಸವಾರಿ ದಿನ ಅರಮನೆ ಸುತ್ತ ಇರುವ ಎಲ್ಲಾ ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ ಇರುತ್ತದೆ. ಕೇವಲ 300 ಜನರಿಗೆ ಮಾತ್ರ ಅರಮನೆಯಲ್ಲಿ ಜಂಬೂಸವಾರಿ ಮೆರವಣಿಗೆ ವೀಕ್ಷಿಸಲು ಅವಕಾಶ ಇದ್ದು, ದೂರದರ್ಶನದಲ್ಲಿ ನೇರ ಪ್ರಸಾರ ಇರಲಿದೆ. ಆದ್ದರಿಂದ ಕೋವಿಡ್ ಸಂದರ್ಭದಲ್ಲಿ ಜನರು ಮನೆಯಿಂದಲೇ ಸರಳ ದಸರಾವನ್ನು ವೀಕ್ಷಣೆ ಮಾಡಬೇಕೆಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದರು.

Exit mobile version